ನಕ್ಸಲರು
ಸುಕ್ಮಾ, ಛತ್ತೀಸಢ: ನಕ್ಸಲರು ಇಟ್ಟಿದ್ದ ನೆಲಬಾಂಬ್ ಸಿಡಿದು ದನ ಮೇಯಿಸಿಕೊಂಡು ಮನೆಗೆ ಹೋಗುತ್ತಿದ್ದ ಮಹಿಳೆ ಮೃತಪಟ್ಟಿರುವ ಘಟನೆ ಸುಕ್ಮಾ ಜಿಲ್ಲೆಯಲ್ಲಿ ಇಂದು ನಡೆದಿದೆ.
ಕಿಸ್ತಾರಾಮ್ ಪೊಲೀಸ್ ಠಾಣೆ ವ್ಯಾಪ್ತಿಯ ದಬ್ಬಾಮರಕಾ ಎಂಬ ಹಳ್ಳಿ ಬಳಿ ಈ ಘಟನೆ ನಡೆದಿದೆ. ಸುದ್ದಿ ತಿಳಿದು ಸುಕ್ಮಾ ಜಿಲ್ಲೆಯ ಎಸ್‌ಪಿ ಪೊಲೀಸ್ ತುಕಡಿಯನ್ನು ಸ್ಥಳಕ್ಕೆ ಕಳುಹಿಸಿದ್ದಾರೆ.
ಮೃತ ಮಹಿಳೆಯನ್ನು ಕಾವಾಸಿ ಸುಕ್ಕಿ ಎಂದು ಗುರುತಿಸಲಾಗಿದೆ. ನಕ್ಸಲರು ಇರಿಸಿದ್ದ ಸುಧಾರಿತ ಸ್ಪೋಟಕವನ್ನು ಆಕಸ್ಮಿಕವಾಗಿ ತುಳಿದು ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಭದ್ರತಾ ಪಡೆಗಳನ್ನು ಗುರಿಯಾಗಿಸಿ ನಕ್ಸಲರು ಈ ಸ್ಫೋಟಕ ಇಟ್ಟಿದ್ದರು. ಕಳೆದ ಮೂರು ವರ್ಷಗಳಲ್ಲಿ ಸುಕ್ಮಾ ಹಾಗೂ ಬಿಜಾಪುರ ಜಿಲ್ಲೆಯಲ್ಲಿ ಇದೇ ರೀತಿ ಐವರು ನಾಗರಿಕರು ನಕ್ಸಲ್ ಬಾಂಬ್‌ಗೆ ಬಲಿಯಾಗಿದ್ದಾರೆ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.