ಸಾಂದರ್ಭಿಕ ಚಿತ್ರ
ಮುಂಬೈ: ಮಹಾರಾಷ್ಟ್ರದ ನಾಗ್ಪುರದಲ್ಲಿ ಇಂದು (ಶನಿವಾರ) ಬಿಜೆಪಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನೂಕುನುಗ್ಗಲು ಉಂಟಾಗಿ 50 ವರ್ಷದ ಮಹಿಳೆಯೊಬ್ಬರು ಮೃತಪಟ್ಟಿದ್ದು, ನಾಲ್ವರು ಮಹಿಳೆಯರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ನಾಗ್ಪುರ ಬಿಜೆಪಿ ಘಟಕವು ರೇಶಿಂಬಾಗ್ ಪ್ರದೇಶದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬೆಳಿಗ್ಗೆ 10.30ರ ಸುಮಾರಿಗೆ ಈ ಘಟನೆ ನಡೆದಿದೆ. ಕಾರ್ಯಕ್ರಮದಲ್ಲಿ ಕಟ್ಟಡ ಕಾರ್ಮಿಕರಿಗೆ ಪಾತ್ರೆಗಳನ್ನು ವಿತರಿಸಲಾಗಿದ್ದು, ಸ್ಥಳದಲ್ಲಿ ಅಪಾರ ಜನಸ್ತೋಮ ನೆರೆದಿತ್ತು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕಾಲ್ತುಳಿತದಲ್ಲಿ ಮೃತಪಟ್ಟ ಮಹಿಳೆಯನ್ನು ಮನು ತುಳಸಿರಾಮ್ ರಜಪೂತ್ ಎಂದು ಗುರುತಿಸಲಾಗಿದೆ. ಗಾಯಗೊಂಡಿದ್ದ ನಾಲ್ವರು ಮಹಿಳೆಯರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಸಂಬಂಧ ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.