ADVERTISEMENT

ಕ್ರೇನ್‌ ಕುಸಿದು ಮಹಿಳೆ ಸಾವು, ಇಬ್ಬರಿಗೆ ಗಾಯ

ಮುಂಬೈನ ಅಂಧೇರಿ ಉಪನಗರದಲ್ಲಿ ನಡೆದ ಘಟನೆ

ಪಿಟಿಐ
Published 31 ಅಕ್ಟೋಬರ್ 2020, 6:07 IST
Last Updated 31 ಅಕ್ಟೋಬರ್ 2020, 6:07 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮುಂಬೈ: ಇಲ್ಲಿನ ಅಂಧೇರಿ ಉಪನಗರದಲ್ಲಿ ಕ್ರೇನ್‌ ಯಂತ್ರ ಮೆಟ್ರೊ ರೈಲಿನ ಕಂಬಕ್ಕೆ ಆಕಸ್ಮಿಕವಾಗಿ ಡಿಕ್ಕಿ ಹೊಡೆದ ಪರಿಣಾಮ ಕ್ರೇನ್‌ನ ಒಂದು ಭಾಗ ಕುಸಿದು ಮಹಿಳೆಯೊಬ್ಬರು ಸಾವನ್ನಪ್ಪಿ, ಇಬ್ಬರು ತೀವ್ರವಾಗಿ ಗಾಯಗೊಂಡಿ ದ್ದಾರೆ.

ಶನಿವಾರ ಮುಂಜಾನೆ ವೆಸ್ಟರ್ನ್‌ ಎಕ್ಸ್‌ಪ್ರೆಸ್‌ ಹೈವೆ ಸಮೀಪದ ಗುಂಡಾವಲಿ ಬಸ್‌ ನಿಲ್ದಾಣದ ಬಳಿ ಈ ಘಟನೆ ಸಂಭವಿಸಿದೆ.

‘ಬಾಂದ್ರದಿಂದ ಜೋಗೇಶ್ವರಿ ಕಡೆಗೆ ಚಲಿಸುತ್ತಿದ್ದ ಕ್ರೇನ್‌, ಚಾಲಕನ ನಿಯಂತ್ರಣ ತಪ್ಪಿ ಮೆಟ್ರೊ ರೈಲಿನ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಇದೇ ವೇಳೆ ಬಸ್‌ಗಾಗಿ ನಿಲ್ದಾಣದಲ್ಲಿ ಕಾಯುತ್ತಿದ್ದ ಮಹಿಳೆಯ ಮೇಲೆ ಕ್ರೇನ್‌ನ ಭಾಗವೊಂದು ಬಿದ್ದು, ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ‘ ಎಂದು ಪೊಲೀಸರು ತಿಳಿಸಿದರು. ಅಪಘಾತದ ನಂತರ ಕ್ರೇನ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಅಧಿಕಾರಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.