ಬಂಧನ
(ಪ್ರಾತಿನಿಧಿಕ ಚಿತ್ರ)
ಕೃಷ್ಣಗಿರಿ(ಚೆನ್ನೈ): ಟಾಟಾ ಎಲೆಕ್ಟ್ರಾನಿಕ್ಸ್ ಲಿಮಿಟೆಡ್‌ನ ವಸತಿನಿಲಯದ ಶೌಚಾಲಯದಲ್ಲಿ ಕ್ಯಾಮೆರಾ ಅಳವಡಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಒಡಿಶಾ ಮೂಲದ ಮಹಿಳೆ ಮತ್ತು ಆಕೆಯ ಸ್ನೇಹಿತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ನೀಲುಕುಮಾರಿ(22) ಬಂಧಿತ ಮಹಿಳೆ. ಟಾಟಾ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಸಿಬ್ಬಂದಿಯಾಗಿರುವ ಅವರು ಅದೇ ವಸತಿನಿಲಯದಲ್ಲಿ ಉಳಿದುಕೊಂಡಿದ್ದಾರೆ.
ಸ್ನೇಹಿತ ಸಂತೋಷ್(25) ಒತ್ತಾಯದ ಮೇರೆಗೆ ಕ್ಯಾಮೆರಾ ಅಳವಡಿಸಿರುವುದಾಗಿ ತನಿಖೆಯ ವೇಳೆ ಆಕೆ ಪೊಲೀಸರಿಗೆ ತಿಳಿಸಿದ್ದಾಳೆ.
ಕ್ಯಾಮೆರಾದಲ್ಲಿ ಸೆರೆಯಾದ ದೃಶ್ಯಗಳನ್ನು ಈವರೆಗೆ ಯಾರಲ್ಲಿಯೂ ಹಂಚಿಕೊಂಡಿಲ್ಲ ಎಂದು ಅವರು ತಿಳಿಸಿದ್ದಾರೆ.
ಹೊಸೂರಿನ ನಾಗಮಂಗಲಂನಲ್ಲಿರುವ ವಸತಿನಿಯಲದಲ್ಲಿ ಈ ಘಟನೆ ನಡೆದಿದೆ. ನವೆಂಬರ್ 2ರಂದು ಮಹಿಳೆಯೊಬ್ಬರು ಶೌಚಾಲಯದಲ್ಲಿ ಕ್ಯಾಮೆರಾ ಇರುವುದನ್ನು ಪತ್ತೆ ಮಾಡಿದ್ದು, ಈ ಬಗ್ಗೆ ತಕ್ಷಣ ಮಾಹಿತಿ ನೀಡಿದ್ದರು. ಘಟನೆಯ ಬೆನ್ನಲ್ಲೇ ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿ ನೂರಾರು ಮಹಿಳೆಯರು ಪ್ರತಿಭಟನೆ ನಡೆಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.