ADVERTISEMENT

ಉತ್ತರ ಪ್ರದೇಶ: ಮದುವೆಯಾಗುವುದಾಗಿ ನಂಬಿಸಿ ಮಹಿಳೆ ಮೇಲೆ ಐದು ವರ್ಷಗಳಿಂದ ಅತ್ಯಾಚಾರ

ಪಿಟಿಐ
Published 13 ಜನವರಿ 2023, 13:39 IST
Last Updated 13 ಜನವರಿ 2023, 13:39 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬಲ್ಲಿಯಾ (ಉತ್ತರ ಪ್ರದೇಶ): 24 ವರ್ಷದ ಮಹಿಳೆಯೊಬ್ಬರನ್ನು ಮದುವೆಯಾಗುವುದಾಗಿ ನಂಬಿಸಿದ್ದ ವ್ಯಕ್ತಿಯೊಬ್ಬ ಐದು ವರ್ಷಗಳಿಂದ ನಿರಂತರವಾಗಿ ಅತ್ಯಾಚಾರ ನಡೆಸಿರುವ ಪ್ರಕರಣ ಜಿಲ್ಲೆಯ ದುಭಾರ್‌ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಮದುವೆಯಾಗುವುದಾಗಿ ಹೇಳಿ ಕಳೆದ ಐದು ವರ್ಷಗಳಿಂದ ಅತ್ಯಾಚಾರ ನಡೆಸಿರುವ ಆರೋಪಿ ಇದೀಗ ಮದುವೆಯಾಗಲು ನಿರಾಕರಿಸಿದ್ದಾನೆ ಎಂದು ಆರೋಪಿಸಿ ಮಹಿಳೆಯು ಗುರುವಾರ ರಾತ್ರಿ ದೂರು ನೀಡಿದ್ದಾರೆ ಎಂದು ದುಭಾರ್ ಪೊಲೀಸ್‌ ಠಾಣೆಯ ಉಸ್ತುವಾರಿ ಅಧಿಕಾರಿ ರಾಜೇಶ್‌ ಮಿಶ್ರಾ ಮಾಹಿತಿ ನೀಡಿದ್ದಾರೆ.

ತನ್ನನ್ನು ನಿಂದಿಸಿದ್ದ ಆರೋಪಿಯು ಕೊಲೆ ಬೆದರಿಕೆಯನ್ನೂ ಹಾಕಿದ್ದ ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಸದ್ಯ ಆರೋಪಿಯನ್ನು ಬಂಧಿಸಲಾಗಿದೆ. ಅತ್ಯಾಚಾರ, ನಿಂದನೆ, ಕೊಲೆ ಬೆದರಿಕೆಗಳಿಗೆ ಸಂಬಂಧಿಸಿದಂತೆ ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಆತನ ವಿರುದ್ಧ ವಿವಿಧ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಮಿಶ್ರಾ ಹೇಳಿದ್ದಾರೆ.

ADVERTISEMENT

ಮಹಿಳೆಯನ್ನು ವೈದ್ಯಕೀಯ ಪರೀಕ್ಷೆ ಸಲುವಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ. ತನಿಖೆ ಪ್ರಗತಿಯಲ್ಲಿದೆ ಎಂದೂ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.