ADVERTISEMENT

ಉತ್ತರ ಪ್ರದೇಶ: ಶೌಚಾಲಯದಲ್ಲಿ ಮಹಿಳೆಯ ಮೇಲೆ ಅತ್ಯಾಚಾರ

ಪಿಟಿಐ
Published 20 ಮಾರ್ಚ್ 2022, 13:22 IST
Last Updated 20 ಮಾರ್ಚ್ 2022, 13:22 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಪ್ರತಾಪಗಡ: ಉತ್ತರ ಪ್ರದೇಶದ ಪ್ರತಾಪಗಡ ರೈಲು ನಿಲ್ದಾಣದ ಪಾರ್ಕಿಂಗ್ ಬಳಿ ಇರುವ ಸಾರ್ವಜನಿಕ ಶೌಚಾಲಯದೊಳಗೆ 20 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಮಾರ್ಚ್ 19ರಂದು ಕೃತ್ಯ ಎಸಗಲಾಗಿದ್ದು, ಈ ಸಂಬಂಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

ಸಂತ್ರಸ್ತೆ, ಪತಿಯೊಂದಿಗೆ ರೈಲಿಗಾಗಿ ಕಾಯುತ್ತಿದ್ದರು. ಈ ಸಂದರ್ಭದಲ್ಲಿ ಘಟನೆ ನಡೆದಿದೆ ಎಂದು ಕೊತ್ವಾಲಿ ಪೊಲೀಸ್ ಠಾಣೆಯ ಎಸ್‌ಎಚ್‌ಒ ಆರ್.ಎನ್. ರೈ ತಿಳಿಸಿದ್ದಾರೆ.

ಬೆಳಿಗ್ಗೆಪತ್ನಿಯನ್ನು ಒಬ್ಬಂಟಿಯಾಗಿ ಬಿಟ್ಟು ಪತಿ ಚಹಾ ತರಲು ಹೋಗಿದ್ದನು. ಈ ವೇಳೆ ಮಹಿಳೆಯ ಬಳಿ ಬಂದ ಆರೋಪಿ ಪಾರ್ಕಿಂಗ್ ಸ್ಟ್ಯಾಂಡ್ ಬಳಿ ಇರುವ ಸ್ವಚ್ಛ ಶೌಚಾಲಯವನ್ನು ಬಳಸಬಹುದು ಎಂದು ಹೇಳಿ ಮಹಿಳೆಯ ಕೈಗೆ ಕೀಲಿಯನ್ನು ನೀಡಿದ್ದಾನೆ. ಬಳಿಕ ಮಹಿಳೆ ಶೌಚಾಲಯಕ್ಕೆ ತೆರಳಿದಾಗ ಆರೋಪಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಘಟನೆ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ.

ಮಹಿಳೆ ನೀಡಿದ ದೂರಿನ ಅನ್ವಯ ನಾವು ಅತ್ಯಾಚಾರ ಆರೋಪದಡಿ ಎಫ್‌ಐಆರ್ (ಐಪಿಸಿ ಸೆಕ್ಷನ್ 376) ದಾಖಲಿಸಿದ್ದೇವೆ. ಆರೋಪಿಯ ಬಂಧನಕ್ಕೆ ಎರಡು ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.