ಅತ್ಯಾಚಾರ (ಸಾಂದರ್ಭಿಕ ಚಿತ್ರ)
ಠಾಣೆ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಹೋಟೆಲ್‌ವೊಂದರಲ್ಲಿ ಮಹಿಳಾ ಭದ್ರತಾ ಸಿಬ್ಬಂದಿ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಯನ್ನು ಅಭಿಷೇಕ್ ಸಿಂಗ್ ಎಂದು ಗುರುತಿಸಲಾಗಿದೆ.
ಇಲ್ಲಿನ ಹೋಟೆಲ್‌ವೊಂದರಲ್ಲಿ ಭದ್ರತಾ ಸಿಬ್ಬಂದಿಯಾಗಿ (ಸೆಕ್ಯುರಿಟಿ ಗಾರ್ಡ್) ಕಾರ್ಯನಿರ್ವಹಿಸುತ್ತಿದ್ದ ಮಹಿಳೆಗೆ ಖಾಯಂ ಕೆಲಸ ಕೊಡಿಸುವುದಾಗಿ ಆರೋಪಿ ಆಮಿಷವೊಡ್ಡಿದ್ದಾನೆ. ಆಕೆಗೆ ಭೇಟಿ ಮಾಡುವಂತೆ ಸೂಚಿಸಿದ್ದಾನೆ. ಭೇಟಿಯ ವೇಳೆ ಆಕೆ ಕುಡಿಯುವ ಪಾನೀಯದಲ್ಲಿ ಮತ್ತು ಬರಿಸುವ ಔಷಧಿ ಬೇರಸಿ ಪ್ರಜ್ಞೆ ತಪ್ಪಿಸಿ, ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ಘಟನೆ ಡಿಸೆಂಬರ್ 30ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಸಂತ್ರಸ್ತೆಗೆ ಪ್ರಜ್ಞೆ ಬಂದಾಗ ಆಕೆ ಮೋಸ ಹೋಗಿರುವುದನ್ನು ಅರಿತುಕೊಂಡರು. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಮಹಿಳೆ ದೂರು ದಾಖಲಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿದ್ದಾರೆ.
ಮಹಿಳೆಯ ದೂರು ಆಧರಿಸಿ ಭಾರತೀಯ ನ್ಯಾಯಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.