ಪ್ರಾತಿನಿಧಿಕ ಚಿತ್ರ
ಧಾರ್ (ಮಧ್ಯಪ್ರದೇಶ): ಮದ್ಯ ಸೇವಿಸಿ ಶಾಲೆಗೆ ಬಂದು ಸಹೋದ್ಯೋಗಿಗಳೊಂದಿಗೆ ಅನುಚಿತವಾಗಿ ವರ್ತಿಸಿದ ಶಿಕ್ಷಕಿಯೊಬ್ಬರನ್ನು ಅಮಾನತು ಮಾಡಿರುವ ಘಟನೆ ಧಾರ್ ಜಿಲ್ಲೆಯಲ್ಲಿ ನಡೆದಿದೆ ಎಂದು ಅಧಿಕಾರಿಗಳು ಬುಧವಾರ ಮಾಹಿತಿ ನೀಡಿದ್ದಾರೆ.
ಜಿಲ್ಲಾ ಕೇಂದ್ರದಿಂದ ಸುಮಾರು 50 ಕಿ.ಮೀ. ದೂರದಲ್ಲಿರುವ ಮನವಾರ್ ವಿಭಾಗದಲ್ಲಿರುವ ಸಿಂಘಾನಾ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ಕುಡಿದ ಮತ್ತಿನಲ್ಲಿ ಅನುಚಿತವಾಗಿ ವರ್ತಿಸಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.
ಜೂನ್ 23ರಂದು ಘಟನೆ ನಡೆದಿದೆ. ಶಿಕ್ಷಕಿಯನ್ನು ಅಮಾನತು ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಲಾಖಾ ತನಿಖೆಗೆ ಆದೇಶಿಸಲಾಗಿದೆ ಎಂದು ಬುಡಕಟ್ಟು ಶಿಕ್ಷಣ ಇಲಾಖೆಯ ಸಹಾಯಕ ಆಯುಕ್ತ ನರೋತ್ತಮ್ ವರ್ಕಾಡೆ ಹೇಳಿದ್ದಾರೆ.
ವಿಡಿಯೊ ಹರಿದಾಡುತ್ತಿದ್ದಂತೆ ಹಿರಿಯ ಅಧಿಕಾರಿಗಳ ಸೂಚನೆಯಂತೆ ಮನವಾರ್ ಕ್ಷೇತ್ರ ಸಂಪನ್ಮೂಲ ಅಧಿಕಾರಿ ಕಿಶೋರ್ ಕುಮಾರ್ ಅವರು ಕ್ರಮ ಕೈಗೊಂಡಿದ್ದಾರೆ. ತನಿಖೆಗೆ ತಂಡ ರಚಿಸಿರುವುದಾಗಿಯೂ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.