ADVERTISEMENT

ಸಿಜೆಐ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದ ಮಹಿಳೆಯಿಂದ ವಿಚಾರಣೆ ಬಹಿಷ್ಕಾರ

ಏಜೆನ್ಸೀಸ್
Published 30 ಏಪ್ರಿಲ್ 2019, 14:58 IST
Last Updated 30 ಏಪ್ರಿಲ್ 2019, 14:58 IST
   

ನವದೆಹಲಿ: ಸುಪ್ರೀಂ ಕೋರ್ಟ್‌ನ ಮುಖ್ಯನ್ಯಾಯಮೂರ್ತಿ ರಂಜನ್‌ ಗೊಗೊಯಿ ಅವರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿರುವ ಮಹಿಳೆ ತಾವು ನ್ಯಾ. ಎಸ್‌.ಎ ಬೋಬ್ಡೆ ಅವರ ನೇತೃತ್ವದ ಸಮಿತಿಯ ವಿಚಾರಣೆಯನ್ನು ಬಹಿಷ್ಕರಿಸುತ್ತಿರುವುದಾಗಿ ತಿಳಿಸಿದ್ದಾರೆ.

ಈ ಕುರಿತು ಮಂಗಳವಾರ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ‘ತಮ್ಮದೇ ಕೆಲ ಮಿತಿಗಳು, ಆತಂಕದ ಹಿನ್ನೆಲೆಯಲ್ಲಿ ನಾನು ಸುಪ್ರೀಂ ಕೋರ್ಟ್‌ನ ಆಂತರಿಕ ಸಮಿತಿಯ ವಿಚಾರಣೆಯಲ್ಲಿ ಪಾಲ್ಗೊಳ್ಳುತ್ತಿಲ್ಲ. ಈ ಸಮಿತಿಯಿಂದ ನನಗೆ ನ್ಯಾಯ ಸಿಗುವುದಿಲ್ಲ ಎಂದು ನಾನು ಭಾವಿಸಿದ್ದೆನೆ. ಆದ್ದರಿಂದಲೇ ವಿಚಾರಣೆಯಿಂದ ನಾನು ದೂರ ಉಳಿಯುತ್ತಿದ್ದೇನೆ,’ ಎಂದು ಅವರು ತಿಳಿಸಿದ್ದಾರೆ.

ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯಿ ಅವರ ವಿರುದ್ಧ ಕೇಳಿ ಬಂದಿರುವ ಲೈಂಗಿಕ ದೌರ್ಜನ್ಯದ ಆರೋಪದ ವಿಚಾರಣೆಗೆಸುಪ್ರೀಂ ಕೋರ್ಟ್‌ ಕಳೆದ ವಾರ ಮೂವರು ನ್ಯಾಯಮೂರ್ತಿಗಳ ಆಂತರಿಕ ತನಿಖಾ ಸಮಿತಿಯನ್ನು ನೇಮಕ ಮಾಡಿದೆ. ಸಮಿತಿಯಲ್ಲಿ ನ್ಯಾ. ಎಸ್‌.ಎ ಬೋಬ್ಡೆ, ಇಂದು ಮಲ್ಹೋತ್ರಾ ಮತ್ತು ಇಂದಿರಾ ಬ್ಯಾನರ್ಜಿ ಅವರು ಇದ್ದಾರೆ.

ಆದರೆ, ಸ್ವತಂತ್ರ ತನಿಖಾ ಸಮಿತಿ ನೇಮಿಸಬೇಕು ಎಂದು ಆರೋಪ ಮಾಡಿರುವ ಮಹಿಳೆಯೂ ಸೇರಿದಂತೆ ಹಲವು ಸಂಘ ಸಂಸ್ಥೆಗಳು ಒತ್ತಾಯಿಸುತ್ತಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.