ADVERTISEMENT

ಇಸ್ರೊ ಕಾರ್ಯಪಡೆಯಲ್ಲಿ ಶೇ 20ರಷ್ಟು ಮಹಿಳೆಯರಿದ್ದಾರೆ: ವಿ.ನಾರಾಯಣನ್

ಪಿಟಿಐ
Published 23 ಮೇ 2025, 10:54 IST
Last Updated 23 ಮೇ 2025, 10:54 IST
<div class="paragraphs"><p>ವಿ.ನಾರಾಯಣನ್</p></div>

ವಿ.ನಾರಾಯಣನ್

   

ಕೋಲ್ಕತ್ತ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ಕಾರ್ಯಪಡೆಯಲ್ಲಿ ಶೇ 20ರಷ್ಟು ಮಹಿಳಾ ಉದ್ಯೋಗಿಗಳಿದ್ದಾರೆ ಮತ್ತು ಅವರು ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷ ವಿ. ನಾರಾಯಣನ್ ಹೇಳಿದ್ದಾರೆ.

ಗುರುವಾರ ಖಾಸಗಿ ಶಾಲೆಯೊಂದರಲ್ಲಿ ಆಯೋಜಿಸಿದ್ದ ಸಮಾರಂಭದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಒಟ್ಟು ಜನಸಂಖ್ಯೆಯಲ್ಲಿ ಅರ್ಧದಷ್ಟಿರುವ ಮಹಿಳೆಯರ ಕೊಡುಗೆ ಇಲ್ಲದೆ ದೇಶದ ಪ್ರಗತಿ ಅಸಾಧ್ಯ ಎಂದು ಪ್ರತಿಪಾದಿಸಿದ್ದಾರೆ.

ADVERTISEMENT

ಇಸ್ರೊದಲ್ಲಿ ಮಹಿಳಾ ಕಾರ್ಯಪಡೆಯ ಬಗ್ಗೆ ಪ್ರತಿಕ್ರಿಯಿಸಿದ ಅವರು, 'ಇಲ್ಲಿ ಬಹಳಷ್ಟು ಮಹಿಳಾ ಉದ್ಯೋಗಿಗಳಿದ್ದಾರೆ. ಅವರು ಅತ್ಯುತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಅವರ ಕೊಡುಗೆಯನ್ನು ಪ್ರೋತ್ಸಾಹಿಸಬೇಕು. ಕ್ರಮೇಣ ಅವರ ಸಂಖ್ಯೆ ಹೆಚ್ಚಾಗಬೇಕು. ನಮ್ಮಲ್ಲಿ ಬಹುಶಃ ಈಗ ಶೇ 20ರಷ್ಟು ಮಹಿಳಾ ವಿಜ್ಞಾನಿಗಳು ಇರಬಹುದು. ಭವಿಷ್ಯದಲ್ಲಿ ಅವರ ಸಂಖ್ಯೆ ಶೇ 40ಕ್ಕಿಂತ ಹೆಚ್ಚಾಗಬೇಕು ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.