ADVERTISEMENT

ದೇವಸ್ಥಾನದಲ್ಲಿ ಮಹಿಳೆಯ ಕೊಲೆ: ಪಂಜಾಬ್‌ನಲ್ಲಿ ಘಟನೆ

ಪಿಟಿಐ
Published 19 ಡಿಸೆಂಬರ್ 2023, 12:30 IST
Last Updated 19 ಡಿಸೆಂಬರ್ 2023, 12:30 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಕಪುರ್ತಲಾ: ವ್ಯಕ್ತಿಯೊಬ್ಬ ದೇವಸ್ಥಾನ ಆವರಣದಲ್ಲಿಯೇ ಭಕ್ತೆಯನ್ನು ಹತ್ಯೆ ಮಾಡಿರುವ ಘಟನೆ ಪಂಜಾಬ್‌ನ ಕಪುರ್ತಲಾದಲ್ಲಿ ನಡೆದಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಮೃತರನ್ನು ಸರಿತಾ ದೇವಿ ಎಂದು ಗುರುತಿಸಲಾಗಿದೆ.

ADVERTISEMENT

ಆರೋಪಿ ಆಗಾಗ ಪಾನಮತ್ತನಾಗಿ ದೇವಸ್ಥಾನಕ್ಕೆ ಬರುತ್ತಿದ್ದ. ಇದನ್ನು ಸರಿತಾ ದೇವಿ ಅವರು ವಿರೋಧಿಸುತ್ತಿದ್ದರು. ಆದರೆ ಸೋಮವಾರ ರಾತ್ರಿ ಮದ್ಯಪಾನ ಮಾಡಿ ಬಂದಿದ್ದ ಆರೋಪಿ ಸರಿತಾ ಮೇಲೆ ಹಲ್ಲೆ ಮಾಡಿದ್ದಾನೆ. ಬಳಿಕ ಚಾಕುವಿನಿಂದ ಅನೇಕ ಬಾರಿ ಚುಚ್ಚಿ ಭೀಕರವಾಗಿ ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಸರಿತಾ ದೇವಸ್ಥಾನದ ಉಸ್ತುವಾರಿ ನೋಡಿಕೊಳ್ಳುತ್ತಿದ್ದರು ಎಂದು ಆಕೆಯ ಪತಿ ಹೇಳಿದ್ದಾರೆ.

ಸರಿತಾ ಪತಿ ರಾಕೇಶ್ ಕುಮಾರ್ ದೂರಿನ ಆಧಾರದ ಮೇಲೆ ಪ್ರಕರಣವನ್ನು ದಾಖಲಿಸಿಕೊಂಡು ಪರಾರಿ ಆಗಿರುವ ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.