ADVERTISEMENT

Video: ಮಹಿಳಾ ಮೀಸಲಾತಿ ಮಸೂದೆ ಮಂಡನೆ- ನಾರಿ ಶಕ್ತಿ ಬಿಲ್ ಇತಿಹಾಸವೇನು?

ಪ್ರಜಾವಾಣಿ ವಿಶೇಷ
Published 19 ಸೆಪ್ಟೆಂಬರ್ 2023, 17:54 IST
Last Updated 19 ಸೆಪ್ಟೆಂಬರ್ 2023, 17:54 IST

ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದರಷ್ಟು ಸ್ಥಾನಗಳನ್ನು ಮೀಸಲಿಡುವ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಲೋಕಸಭೆಯಲ್ಲಿ ಮಂಡಿಸಿದರು. ಹೊಸ ಸಂಸತ್ ಕಟ್ಟಡದಲ್ಲಿ ಮೊದಲ ಮಸೂದೆಯಾಗಿ ಮಂಡನೆಯಾಗಿರುವ ಮಹಿಳಾ ಮೀಸಲಾತಿ ಮಸೂದೆಯು, ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ನೀತಿ ನಿರೂಪಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರ ಭಾಗವಹಿಸಲು ಅನುವು ಮಾಡಿಕೊಡುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.