ಮುಂಬೈ: ಮಹಿಳಾ ಸಹಕಾರ ಸಮಾಜಗಳನ್ನು ಶೀಘ್ರವೇ ರಚಿಸಿ, ನೋಂದಾಯಿಸಲಾಗುವುದು ಮತ್ತು ಅವುಗಳಿಗೆ ಸರ್ಕಾರಿ ಗುತ್ತಿಗೆಗಳನ್ನು ನೀಡಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೆಂದ್ರ ಫಡಣವೀಸ್ ಅವರು ಶನಿವಾರ ತಿಳಿಸಿದರು.
ಕೈಗಾರಿಕೆ, ವಾಣಿಜ್ಯ ಮತ್ತು ವ್ಯಾಪಾರ ಕ್ಷೇತ್ರಗಳಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆಯನ್ನು ಹೆಚ್ಚಿಸಲು ಸರ್ಕಾರಿ ಗುತ್ತಿಗೆಗಳನ್ನು ನೀಡಲಾಗುವುದು ಎಂದರು.
ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, 2024ರ ವಿಧಾನಸಭೆ ಚುನಾವಣೆಗೂ ಮುನ್ನ ಘೋಷಿಸಿದ ಯಾವುದೇ ಯೋಜನೆಗಳನ್ನೂ ನಿಲ್ಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಮುಂದಿನ 20 ವರ್ಷಗಳಲ್ಲಿ ಭಾರತವು ಮೊದಲ ಅಥವಾ ಎರಡನೇ ಅತಿದೊಡ್ಡ ಆರ್ಥಿಕತೆ ಹೊಂದಿರುವ ರಾಷ್ಟ್ರವಾಗಲಿದೆ. ಈ ಹಾದಿಯಲ್ಲಿ ಮಹಿಳೆ ಪಾತ್ರ ಮುಖ್ಯವಾಗಲಿದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.