ADVERTISEMENT

370ನೇ ವಿಧಿ ಮರುಸ್ಥಾಪಿಸುವರೆಗೂ ಚುನಾವಣೆಗೆ ಸ್ಪರ್ಧಿಸಲ್ಲ: ಮೆಹಬೂಬ ಮುಫ್ತಿ

​ಪ್ರಜಾವಾಣಿ ವಾರ್ತೆ
Published 21 ಮೇ 2023, 10:28 IST
Last Updated 21 ಮೇ 2023, 10:28 IST
ಮೆಹಬೂಬ ಮುಫ್ತಿ
ಮೆಹಬೂಬ ಮುಫ್ತಿ   

ಬೆಂಗಳೂರು: ‘ಸಂವಿಧಾನದ 370ನೇ ವಿಧಿಯನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಮರುಸ್ಥಾಪಿಸುವರೆಗೂ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ’ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬ ಮುಫ್ತಿ ಹೇಳಿದರು.

ಭಾನುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಜಮ್ಮು ಮತ್ತು ಕಾಶ್ಮೀರಕ್ಕಿದ್ದ ವಿಶೇಷ ಸ್ಥಾನಮಾನವು ಒಕ್ಕೂಟ ವ್ಯವಸ್ಥೆಗೆ ಅತ್ಯುತ್ತಮ ಉದಾಹರಣೆಯಾಗಿತ್ತು. ಆದರೆ, ಕೇಂದ್ರ ಸರ್ಕಾರವು 370 ನೇ ವಿಧಿಯನ್ನು ರದ್ದುಗೊಳಿಸುವ ಮೂಲಕ ರಾಜ್ಯವನ್ನು ಛಿದ್ರಗೊಳಿಸಿತು. ಇಲ್ಲಿ ಭದ್ರತೆಯ ಹೆಸರಿನಲ್ಲಿ ಪ್ರತಿದಿನ ಕಿರುಕುಳ ಮತ್ತು ತಪಾಸಣೆ ನಡೆಯುತ್ತಿದೆ. ಜಮ್ಮು ಮತ್ತು ಕಾಶ್ಮೀರ ವಿಶ್ವದಲ್ಲೇ ಅತ್ಯಂತ ಮಿಲಿಟರೀಕೃತ ರಾಜ್ಯವಾಗಿ ಮಾರ್ಪಟ್ಟಿದೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಪಕ್ಷ ಪಿಪಲ್ಸ್‌ ಡೆಮಾಕ್ರಟಿಕ್‌ ಪಾರ್ಟಿ (ಪಿಡಿಪಿ) ಸ್ಪರ್ಧಿಸುತ್ತದೆ. ಆದರೆ, ನಾನು ಸ್ಪರ್ಧಿಸುವುದಿಲ್ಲ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT