ADVERTISEMENT

ಹಿಂದೂ ದೇವರ ಪೂಜಿಸಬೇಡಿ: ಎಎಪಿ ಸಚಿವ ರಾಜೇಂದ್ರ ಪಾಲ್‌ ವಿರುದ್ಧ ಬಿಜೆಪಿ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 7 ಅಕ್ಟೋಬರ್ 2022, 11:00 IST
Last Updated 7 ಅಕ್ಟೋಬರ್ 2022, 11:00 IST
ಎಎಪಿ ಶಾಸಕ ಭಾಗಿಯಾಗಿರುವುದು
ಎಎಪಿ ಶಾಸಕ ಭಾಗಿಯಾಗಿರುವುದು   

ನವದೆಹಲಿ:ಧಾರ್ಮಿಕ ಮತಾಂತರ ಕಾರ್ಯಕ್ರಮದಲ್ಲಿ ‘ಹಿಂದೂ ದೇವರಿಗೆ ಪ್ರಾರ್ಥಿಸಬೇಡಿ’ ಎಂದುಆಮ್ ಆದ್ಮಿ ಪಕ್ಷದ (ಎಎಪಿ) ಸಚಿವ ರಾಜೇಂದ್ರ ಪಾಲ್ ಗೌತಮ್ ಹೇಳಿಕೆ ವಿದಾದಕ್ಕೆ ಕಾರಣವಾಗಿದ್ದು. ಸಚಿವರ ವಿರುದ್ಧಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.

ಅ.5ರಂದು (ವಿಜಯದಶಮಿ) ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 10 ಸಾವಿರ ಹಿಂದೂಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡ ಸಮಾರಂಭದಲ್ಲಿ ರಾಜೇಂದ್ರ ಪಾಲ್ ಗೌತಮ್ ಭಾಗವಹಿಸಿದ್ದರು.

‘ಇಂಡಿಯಾ ಟುಡೆ‘ ವರದಿ ಮಾಡಿರುವ ಪ್ರಕಾರಅವರು ಬೌದ್ಧ ಧರ್ಮಕ್ಕೆ ಮತಾಂತರಗೊಂಡ ಬಳಿಕ ಮಾತನಾಡಿ ‘ಬ್ರಹ್ಮ, ವಿಷ್ಣು, ಶಿವ, ರಾಮ, ಶ್ರೀ ಕೃಷ್ಣ, ಗೌರಿ ಮತ್ತು ಗಣಪತಿ ಅಥವಾ ಯಾವುದೇ ಹಿಂದೂ ದೇವರುಗಳ ಪೂಜೆಯನ್ನು ಮಾಡುವುದಿಲ್ಲ’ ಎಂದು ಹೇಳಿದ್ದಾರೆ.

ADVERTISEMENT

ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ರಾಜೇಂದ್ರ ಪಾಲ್ ವಿರುದ್ಧ ಬಿಜೆಪಿ ನಾಯಕರು ತೀವ್ರ ವಾಗ್ದಾಳಿ ನಡೆಸಿದ್ದು, ಅವರನ್ನು ಸಂಪುಟದಿಂದ ವಜಾಗೊಳಿಸಿ, ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

‘ಕೇಜ್ರಿವಾಲ್ ಸರ್ಕಾರದ ಸಂಪುಟ ಸಚಿವ ರಾಜೇಂದ್ರ ಪಾಲ್ ಅವರು ಹಿಂದೂಗಳ ವಿರುದ್ಧ ಹೇಗೆ ವಿಷವನ್ನು ಉಗುಳುತ್ತಿದ್ದಾರೆ ಎಂಬುದನ್ನು ನೋಡಿ. ಕೇಜ್ರಿವಾಲ್ ಮತ್ತು ಎಎಪಿಯ ಹಿಂದೂ ವಿರೋಧಿ ಮುಖವು ಎಲ್ಲರ ಮುಂದೆ ಅನಾವರಣಗೊಂಡಿದೆ. ಎಎಪಿಗೆ ಮತದಾರರು ತಕ್ಕ ಉತ್ತರ ನೀಡಲಿದ್ದಾರೆ’ ಎಂದು ಬಿಜೆಪಿ ಟ್ವೀಟ್ ಮಾಡಿದೆ.

ರಾಜೇಂದ್ರ ಪಾಲ್ ಅವರು ಹಿಂದೂಗಳ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿದ್ದಾರೆ. ಅವರ ವಿರುದ್ಧ ಕೂಡಲೇ ಕ್ರಮ ತೆಗೆದುಕೊಳ್ಳಬೇಕು ಎಂದು ದೆಹಲಿ ಬಿಜೆಪಿ ಘಟಕದ ಮುಖ್ಯಸ್ಥ ಆದೇಶ್ ಗುಪ್ತಾ ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.