ADVERTISEMENT

ಕೊರೊನಾ: ಉತ್ತರ ಪ್ರದೇಶದಲ್ಲಿ ಎನ್‌ಪಿಆರ್ ಪ್ರಕ್ರಿಯೆ ಮುಂದೂಡಿಕೆ

ಏಜೆನ್ಸೀಸ್
Published 16 ಮೇ 2020, 5:13 IST
Last Updated 16 ಮೇ 2020, 5:13 IST
   

ಲಖನೌ: ಕೊರೊನಾ ವೈರಸ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಸರ್ಕಾರವು ‘ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್‌) 2021’ ಕೆಲಸ ಕಾರ್ಯಗಳನ್ನು ಮುಂದೂಡಿದೆ.

ಕೋವಿಡ್–19 ಹಿನ್ನೆಲೆಯಲ್ಲಿಎನ್‌ಪಿಆರ್‌ಪರಿಷ್ಕರಣೆಯನ್ನು ಮಾರ್ಚ್‌ 25ರಂದೇ ಕೇಂದ್ರ ಸರ್ಕಾರ ಮುಂದೂಡಿತ್ತು.2021ರ ಮೊದಲ ಹಂತದ ಜನಗಣತಿ ಮತ್ತು ಎನ್‌ಪಿಆರ್‌ ಅನ್ನು ಮುಂದಿನ ಆದೇಶದ ವರೆಗೆ ಮುಂದೂಡಲಾಗಿದೆ ಎಂದು ಗೃಹ ಸಚಿವಾಲಯ ತಿಳಿಸಿತ್ತು.ಕೊವಿಡ್‌–19 ಸೋಂಕು ಭೀತಿ ಹಿನ್ನೆಲೆಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ), ಎನ್‌ಪಿಆರ್‌ನಂತಹ ಯೋಜನೆಗಳನ್ನು ಸರ್ಕಾರ ಮುಂದೂಡಬೇಕು ಎಂದು ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳು ಸರ್ಕಾರವನ್ನು ಒತ್ತಾಯಿಸಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.