ಮಧುರೈ: ತಮಿಳುನಾಡಿನ ಮಧುರೈಯಲ್ಲಿ ನಿರ್ಮಾಣ ಹಂತದಲ್ಲಿರುವ ಸೇತುವೆಯ ಒಂದು ಭಾಗ ಕುಸಿದು ಕಾರ್ಮಿಕ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅವಘಡದಲ್ಲಿ ಉತ್ತರ ಪ್ರದೇಶದ ವಲಸೆ ಕಾರ್ಮಿಕ ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:ಯುನಸ್ಕೊ ವಿಶ್ವ ಪಾರಂಪರಿಕ ತಾಣಗಳ ಮಾಹಿತಿವುಳ್ಳ ಕೃತಿ ಬಿಡುಗಡೆ
ರಕ್ಷಣಾ ಕಾರ್ಯಾಚರಣೆಗೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ನೇತೃತ್ವ ವಹಿಸಿದರು.
ಈ ಕುರಿತು ಜಿಲ್ಲಾಧಿಕಾರಿ ಎಸ್. ಅನೀಶ್ ಶೇಖರ್ ಮಾಹಿತಿ ನೀಡಿದ್ದು, 'ಉತ್ತರ ಪ್ರದೇಶದ ಮೂಲದ ಕಾರ್ಮಿಕ ಮೃತಪಟ್ಟಿದ್ದು, ಅವಶೇಷಗಳ ಅಡಿಯಲ್ಲಿ ಬೇರೆ ಯಾರೂ ಸಿಲುಕಿಲ್ಲ. ಉಳಿದಿರುವ ಏಳು ಕಿ.ಮೀ. ದೂರದ ನಿರ್ಮಾಣದ ಪ್ರಗತಿಯನ್ನು ಪರಿಶೀಲಿಸಲಾಗುವುದು. ಅಲ್ಲದೆ ಘಟನೆ ಬಗ್ಗೆ ತನಿಖೆ ನಡೆಸಲಾಗುವುದು' ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.