ಅಹಮದಾಬಾದ್: ಗುಜರಾತ್‌ನ ಬನಸ್ಕಾಂತ ಜಿಲ್ಲೆಯ ದೀಸಾದಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, ಕನಿಷ್ಠ ಏಳು ಕಾರ್ಮಿಕರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ರಕ್ಷಣಾ ಕಾರ್ಯ ಪ್ರಗತಿಯಲ್ಲಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಗ್ನಿಶಾಮಕ ದಳ, ಪೊಲೀಸರು ಅಧಿಕಾರಿಗಳ ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತವಾಗಿವೆ. ಸ್ಫೋಟದಲ್ಲಿ ಎಷ್ಟು ಕಾರ್ಮಿಕರು ಸಿಲುಕಿಕೊಂಡಿದ್ದಾರೆಂದು ಇನ್ನೂ ತಿಳಿದಿಲ್ಲ ಎಂದು ಅವರು ತಿಳಿಸಿದ್ದಾರೆ.
ಪ್ರಾಥಮಿಕ ಮಾಹಿತಿಯ ಪ್ರಕಾರ 7 ಮಂದಿ ಕಾರ್ಮಿಕರು ಮೃತಪಟ್ಟಿದ್ದಾರೆ. ರಕ್ಷಿಸಲ್ಪಟ್ಟ ಐವರು ಕಾರ್ಮಿಕರನ್ನು ದೀಸಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.