ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗೆ (ಪಿಎನ್‌ಬಿ) ₹13 ಸಾವಿರ ಕೋಟಿ ವಂಚಿಸಿದ ಪ್ರಕರಣದಲ್ಲಿ ಬೆಲ್ಜಿಯಂನಲ್ಲಿ ಬಂಧಿತರಾಗಿರುವ ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿಯನ್ನು ಭಾರತಕ್ಕೆ ಕರೆತರಲು ಆ ದೇಶದೊಂದಿಗೆ ನಿಕಟವಾಗಿ ಕಾರ್ಯ ನಿರ್ವಹಿಸಲಾಗುತ್ತಿದೆ ಎಂದು ಭಾರತ ಗುರುವಾರ ತಿಳಿಸಿದೆ.
ಈ ಕುರಿತು ಮಾತನಾಡಿದ ವಿದೇಶಾಂಗ ವ್ಯವಹಾರಗಳ ಇಲಾಖೆಯ ವಕ್ತಾರ ರಣಧೀರ್ ಜೈಸ್ವಾಲ್, ‘ಚೋಕ್ಸಿಯನ್ನು ಭಾರತಕ್ಕೆ ಕರೆತಂದ ಬಳಿಕ ಆತನ ವಿಚಾರಣೆ ಸಾಧ್ಯವಾಗಲಿದೆ’ ಎಂದಿದ್ದಾರೆ.
ಭಾರತ ಸರ್ಕಾರದ ಕೋರಿಕೆ ಮೇರೆಗೆ ಚೋಕ್ಸಿಯನ್ನು ಬೆಲ್ಜಿಯಂನ ಆ್ಯಂಟ್‌ವರ್ಕ್‌ನಲ್ಲಿ ಬಂಧಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.