ಪ್ರಧಾನಿ ನರೇಂದ್ರ ಮೋದಿ
(ಸಂಗ್ರಹ ಚಿತ್ರ)
ನವದೆಹಲಿ: ಉತ್ತಮ ಆರೋಗ್ಯ ವೃದ್ಧಿಯು ಅಭಿವೃದ್ಧಿ ಹೊಂದುತ್ತಿರುವ ಸಮಾಜದ ಅಡಿಪಾಯದಂತೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ವಿಶ್ವ ಆರೋಗ್ಯ ದಿನದ ಅಂಗವಾಗಿ ಇಂದು (ಸೋಮವಾರ) ಸಾಮಾಜಿಕ ಜಾಲತಾಣ 'ಎಕ್ಸ್'ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಕೇಂದ್ರ ಸರ್ಕಾರವು ಆರೋಗ್ಯ ಕ್ಷೇತ್ರದತ್ತ ಹೆಚ್ಚಿನ ಗಮನ ಹರಿಸುತ್ತಿದ್ದು, ಹಾಗೆಯೇ ಮುಂದುವರಿಸುತ್ತದೆ ಎಂದು ಭರವಸೆ ನೀಡಿದ್ದಾರೆ.
ಸಮಾಜದಲ್ಲಿ ಜನರು ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಆ ಸಮಾಜದ ಅಭಿವೃದ್ಧಿಗೆ ಅಡಿಪಾಯವಾಗುತ್ತದೆ ಎಂದು ಮೋದಿ ತಿಳಿಸಿದ್ದಾರೆ.
'ವಿಶ್ವ ಆರೋಗ್ಯ ದಿನದಂದು, ಆರೋಗ್ಯಕರ ಜಗತ್ತನ್ನು ನಿರ್ಮಿಸುವ ನಮ್ಮ ಬದ್ಧತೆಯನ್ನು ಪುನರುಚ್ಚರಿಸೋಣ' ಎಂದು ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.