ADVERTISEMENT

ವಿಡಿಯೊ ಕಾನ್ಫರೆನ್ಸ್ ಮೂಲಕ ಸಾಮಾನ್ಯ ಸಭೆಯ 75ನೇ ಅಧಿವೇಶನ

ಪಿಟಿಐ
Published 23 ಜುಲೈ 2020, 7:26 IST
Last Updated 23 ಜುಲೈ 2020, 7:26 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ವಿಶ್ವಸಂಸ್ಥೆ:ವಿಶ್ವಸಂಸ್ಥೆಯ 75 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಸಾಮಾನ್ಯ ಸಭೆ ಜರುಗಲಿದ್ದು, 193 ಸದಸ್ಯ ರಾಷ್ಟ್ರಗಳು ಭಾಗವಹಿಸಲಿವೆ.

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 75ನೇ ಅಧಿವೇಶನವು ಸೆ. 15 ರಂದು ಪ್ರಾರಂಭವಾಗಲಿದೆ. ಕೊರೊನಾ ವೈರಸ್ ನಿಂದಾಗಿ ವಿಡಿಯೊ ಕಾನ್ಫರೆನ್ಸ್‌ ಮೂಲಕ ಸಭೆ ನಡೆಸಲು ನಿರ್ಣಯ ಕೈಗೊಳ್ಳಲಾಗಿದ್ದು, ಪ್ರಮುಖ ದೇಶಗಳ ನಾಯಕರು ತಮ್ಮ ಭಾಷಣದ ವಿಡಿಯೊಗಳನ್ನು ಸಾಮಾನ್ಯ ಸಭೆಗೆ ಕಳುಹಿಸಲಿದ್ದಾರೆ.

ಸದಸ್ಯ ರಾಷ್ಟ್ರಗಳ, ವೀಕ್ಷಕ ರಾಷ್ಟ್ರಗಳ ಹಾಗೂ ಯುರೋಪಿಯನ್‌ ರಾಷ್ಟ್ರಗಳ ಮುಖ್ಯಸ್ಥರಭಾಷಣದ ವಿಡಿಯೊಗಳನ್ನು ಸಾಮಾನ್ಯ ಸಭೆಯ ಸಭಾಂಗಣದಲ್ಲಿ ಪ್ರಸಾರ ಮಾಡಲಾಗುವುದು ಎಂದು ಬುಧವಾರ ಸಾಮಾನ್ಯ ಸಭೆ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.