ADVERTISEMENT

ಸರ್ಕಾರದ ಭರವಸೆ ನಂತರ ಹೋರಾಟ ಅಂತ್ಯಗೊಳಿಸಿದ ಕುಸ್ತಿಪಟುಗಳು

ಪಿಟಿಐ
Published 21 ಜನವರಿ 2023, 6:07 IST
Last Updated 21 ಜನವರಿ 2023, 6:07 IST
   

ನವದೆಹಲಿ: ದೂರುಗಳನ್ನು ಪರಿಹರಿಸುವ ಬಗ್ಗೆ ಸರ್ಕಾರದಿಂದ ಭರವಸೆ ಸಿಕ್ಕ ಹಿನ್ನೆಲೆಯಲ್ಲಿ ಕುಸ್ತಿಪಟುಗಳು ತಮ್ಮ ಹೋರಾಟವನ್ನು ಶುಕ್ರವಾರ ತಡರಾತ್ರಿ ಅಂತ್ಯಗೊಳಿಸಿದ್ದಾರೆ.

ಕುಸ್ತಿ ಫೆಡರೇಶನ್‌ನ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಸ್ಥಾನದಿಂದ ಕೆಳಗಿಳಿಯಲಿದ್ದಾರೆ ಎಂದು ಸರ್ಕಾರ ಹೋರಾಟಗಾರರಿಗೆ ಭರವಸೆ ನೀಡಿದೆ.

ವಿನೇಶ್ ಫೋಗಟ್, ಬಜರಂಗ್ ಪುನಿಯಾ, ಸಾಕ್ಷಿ ಮಲಿಕ್ ಮತ್ತು ರವಿ ದಹಿಯಾ ಸೇರಿದಂತೆ ಹಲವು ಕುಸ್ತಿಪಟುಗಳು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರೊಂದಿಗೆ ಶುಕ್ರವಾರ ರಾತ್ರಿ ಎರಡನೇ ಸುತ್ತಿನ ಮಾತುಕತೆಯ ನಡೆಸಿದರು. ಮಾತುಕತೆ ವೇಳೆ ಸರ್ಕಾರ ಹೋರಾಟಗಾರರ ದೂರುಗಳನ್ನು ಪರಿಶೀಲಿಸುವುದಾಗಿ ಭರವಸೆ ನೀಡಿದೆ. ಅದೇ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ಕೊನೆಗೊಳಿಸಲು ಹೋರಾಟಗಾರರು ನಿರ್ಧರಿಸಿದರು.

ADVERTISEMENT

ದೂರುಗಳ ತನಿಖೆಗೆ ಮೇಲುಸ್ತುವಾರಿ ಸಮಿತಿ ರಚಿಸಲಾಗುವುದು. ಆರೋಪಗಳ ತನಿಖೆ ಮಾಡುವವರೆಗೆ ಡಬ್ಲ್ಯುಎಫ್‌ಐ ಮುಖ್ಯಸ್ಥರು ತಮ್ಮ ಸ್ಥಾನದಿಂದ ಕೆಳಗಿಳಿಯಲಿದ್ದಾರೆ ಎಂದು ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.