ADVERTISEMENT

Wrestlers Protest: ಪ್ರಕರಣ ಅತ್ಯಂತ ಸೂಕ್ಷ್ಮವಾಗಿ ನಿಭಾಯಿಸುತ್ತಿದ್ದೇವೆ: ಅನುರಾಗ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 1 ಜೂನ್ 2023, 9:49 IST
Last Updated 1 ಜೂನ್ 2023, 9:49 IST
ಕುಸ್ತಿಪಟುಗಳ ಪ್ರತಿಭಟನೆ
ಕುಸ್ತಿಪಟುಗಳ ಪ್ರತಿಭಟನೆ    (ಸಂಗ್ರಹ ಚಿತ್ರ)

ಮುಂಬೈ: ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಷನ್‌ನ ಅಧ್ಯಕ್ಷ ಬ್ರಿಜ್‌ಭೂಷಣ್‌ ಸಿಂಗ್‌ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಕುಸ್ತಿಪಟುಗಳು ನಡೆಸುತ್ತಿರುವ ಪ್ರತಿಭಟನೆಯನ್ನು ಅತ್ಯಂತ ಸೂಕ್ಷ್ಮವಾಗಿ ನಿಭಾಯಿಸುತ್ತಿದ್ದೇವೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ.

ಈ ಕುರಿತು ಸುದ್ದಿಸಂಸ್ಥೆ 'ಎಎನ್‌ಐ' ಟ್ವೀಟ್ ಮಾಡಿದೆ.

ಕುಸ್ತಿಪಟುಗಳ ಬೇಡಿಕೆಗಳನ್ನೆಲ್ಲ ನಾವು ಪರಿಗಣಿಸುತ್ತಿದ್ದೇವೆ. ದೆಹಲಿ ಪೊಲೀಸ್ ಚಾರ್ಜ್‌ಶೀಟ್ ಸಲ್ಲಿಸಿದ ನಂತರ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ADVERTISEMENT

ಈ ಪ್ರಕರಣವನ್ನು ರಾಜಕೀಯಗೊಳಿಸುತ್ತಿರುವವರಿಗೆ ನಾನು ಹೇಳಲು ಬಯಸುವುದೇನೆಂದರೆ ಕಾನೂನು ಎಲ್ಲರಿಗೂ ಸಮಾನವಾಗಿದೆ. ಎಲ್ಲ ಆಟಗಾರರು ನಮಗೆ ಮುಖ್ಯ ಎಂದು ಹೇಳಿದ್ದಾರೆ.

ಪ್ರತಿಭಟನಾನಿರತ ಕುಸ್ತಿಪಟುಗಳಿಗೆ ಬೆಂಬಲ ಸೂಚಿಸಿ ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ಇಂದು 'ಮಹಾಪಂಚಾಯತ್' ಹಮ್ಮಿಕೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.