‘ಯಾಬಾ’ ಮಾತ್ರೆಗಳು
ಗುವಾಹಟಿ: ಅಸ್ಸಾಂನ ಶ್ರೀಭೂಮಿ ಜಿಲ್ಲೆಯಲ್ಲಿ ಇಂದು (ಶನಿವಾರ) ನಡೆಸಲಾದ ಎರಡು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ₹7 ಕೋಟಿ ಮೌಲ್ಯದ ನಿಷೇಧಿತ ಯಾಬಾ ಮಾತ್ರೆ (ಡ್ರಗ್ಸ್ ಮಾತ್ರೆಗಳು)ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಪ್ರಕರಣ ಸಂಬಂಧ ಮೂವರನ್ನು ಬಂಧಿಸಲಾಗಿದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ತಿಳಿಸಿದ್ದಾರೆ.
ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಜಿಲ್ಲೆಯ ಪುವಾಮರಾ ಪ್ರದೇಶದಲ್ಲಿ 50,000 ಯಾಬಾ ಮಾತ್ರೆಗಳನ್ನು ವಶಪಡಿಸಿಕೊಳ್ಳಲಾಗಿದ್ದು, ವ್ಯಕ್ತಿಯನ್ನು ಬಂಧಿಸಲಾಗಿದೆ. ಲೊಂಗೈ ಪ್ರದೇಶದಲ್ಲಿ ನಡೆಸಿದ ಮತ್ತೊಂದು ಕಾರ್ಯಾಚರಣೆಯಲ್ಲಿ 5,800 ಮಾತ್ರೆಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ ಎಂದು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಶರ್ಮಾ ಪೋಸ್ಟ್ ಮಾಡಿದ್ದಾರೆ.
ಯಾಬಾ ಎಂಬುದು ಮೆಟಾಂಫೆಟಮೈನ್ ಮತ್ತು ಕೆಫೇನ್‌ನ ಮಿಶ್ರಣ ಹೊಂದಿದ್ದು, ಉತ್ತೇಜಕ ಮತ್ತು ವ್ಯಸನಕಾರಿ ಮಾತ್ರೆಯಾಗಿದೆ. ಇದನ್ನು ದೇಶದಲ್ಲಿ ನಿಷೇಧಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.