ADVERTISEMENT

Yamuna Floods | ಕೇಂದ್ರದ ಮಧ್ಯಸ್ಥಿಕೆಗೆ ಕೇಜ್ರಿವಾಲ್ ಆಗ್ರಹ

ಪಿಟಿಐ
Published 12 ಜುಲೈ 2023, 13:25 IST
Last Updated 12 ಜುಲೈ 2023, 13:25 IST
ಅರವಿಂದ ಕೇಜ್ರಿವಾಲ್
ಅರವಿಂದ ಕೇಜ್ರಿವಾಲ್   

ನವದೆಹಲಿ: ಯಮುನಾ ನದಿಯಲ್ಲಿ ನೀರಿನ ಹರಿವು ಸಾರ್ವಕಾಲಿಕ ಗರಿಷ್ಠ ಮಟ್ಟ ಮೀರಿದ್ದು, (207.55 ಮೀಟರ್‌) ಇದನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ತುರ್ತಾಗಿ ಮಧ್ಯಪ್ರವೇಶಿಸಬೇಕು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಬುಧವಾರ ಆಗ್ರಹಿಸಿದ್ದಾರೆ.

‘1978ರಲ್ಲಿ 207.49 ಮೀಟರ್‌ನಷ್ಟು ಹರಿದಿದ್ದೆ ಇದೂವರೆಗಿನ ದಾಖಲೆ. ಕೇಂದ್ರ ಜಲ ಆಯೋಗ ಯಮುನೆಯ ನೀರಿನ ಮಟ್ಟ 207.72 ಮೀಟರ್‌ ಹರಿವಿಗೆ ತಲುಪಬಹುದು ಎಂದು ಮುನ್ಸೂಚನೆ ನೀಡಿರುವುದು ದೆಹಲಿಯ ಜನರಿಗೆ ಒಳ್ಳೆಯ ಸುದ್ದಿಯಲ್ಲ’ ಎಂದು ಟ್ವಿಟರ್‌ನಲ್ಲಿ ಉಲ್ಲೇಖಿಸಿದ್ದಾರೆ.

‘ದೆಹಲಿಯಲ್ಲಿ ಎರಡು ದಿನದಿಂದಲೂ ಮಳೆಯಾಗಿಲ್ಲ. ಹರಿಯಾಣದ ಹಥಿನೀಕುಂಡ್‌ ಬ್ಯಾರೇಜ್‌ನಿಂದ ಅಸಹಜವಾಗಿ ಹೆಚ್ಚು ನೀರನ್ನು ಬಿಡುಗಡೆ ಮಾಡುತ್ತಿರುವುದರಿಂದ ಯಮುನೆಯ ಮಟ್ಟ ಹೆಚ್ಚಿದೆ. ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ನೀರಿನ ಮಟ್ಟ ಹೆಚ್ಚಾಗದಂತೆ ನೋಡಿಕೊಳ್ಳಬೇಕು’ ಎಂದು ಕೇಜ್ರಿವಾಲ್ ಒತ್ತಾಯಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.