ADVERTISEMENT

12 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಮರಕ್ಕೆ ನೇಣು ಹಾಕಿದ ಅಪ್ರಾಪ್ತರು

ಏಜೆನ್ಸೀಸ್
Published 2 ಮಾರ್ಚ್ 2020, 5:49 IST
Last Updated 2 ಮಾರ್ಚ್ 2020, 5:49 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಗುವಾಹಟಿ: ಅಸ್ಸಾಂನ ಬಿಸ್ವನಾಥ್ ಜಿಲ್ಲೆಯಲ್ಲಿ 12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ‌ಎಸಗಿ ಹತ್ಯೆಗೈದ ಆರೋಪದ ಮೇಲೆ 10ನೇ ತರಗತಿ ಪರೀಕ್ಷೆ ಮುಗಿಸಿದ್ದ7 ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗೋಹಪುರ ಪೊಲೀಸ್ ಠಾಣೆ ವ್ಯಾಪ್ತಿಯ ಚಕ್ಲಾ ಗ್ರಾಮದಲ್ಲಿ ಶುಕ್ರವಾರ ಘಟನೆ ನಡೆದಿದ್ದು, ಅತ್ಯಾಚಾರ ಎಸಗಿದ ನಂತರ ಬಾಲಕಿಯನ್ನು ಮರಕ್ಕೆ ನೇಣು ಹಾಕಲಾಗಿದೆ.

ಬಂಧಿತರಾದ ವಿದ್ಯಾರ್ಥಿಗಳು 10ನೇ ತರಗತಿ ಪರೀಕ್ಷೆ ಮುಗಿಸಿದ್ದರು ಎಂದು ಹಿರಿಯ ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಪರೀಕ್ಷೆನಂತರಪಾರ್ಟಿ ಆಯೋಜಿಸುವ ನೆಪದಲ್ಲಿ ಆರೋಪಿಗಳು ಸಂತ್ರಸ್ತೆಯನ್ನು ಮನೆಗೆ ಕರೆದು ಅತ್ಯಾಚಾರ ಎಸಗಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಶುಕ್ರವಾರ ರಾತ್ರಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ನಂತರ ಮನೆಯ ಸಮೀಪದ ಕಾಡಿನಲ್ಲಿದ್ದ ಮರಕ್ಕೆ ನೇಣುಹಾಕಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಶನಿವಾರ ಬಾಲಕಿಯ ಶವ ಪತ್ತೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.