ADVERTISEMENT

ಜಾಗತಿಕ ಮಟ್ಟದಲ್ಲಿ ಯೋಗಕ್ಕೆ ಭಾರಿ ಮನ್ನಣೆ: ಪ್ರಧಾನಿ ಮೋದಿ

ಪಿಟಿಐ
Published 13 ಜೂನ್ 2022, 11:03 IST
Last Updated 13 ಜೂನ್ 2022, 11:03 IST
2019 ಜೂನ್ 21ರಂದು ರಾಂಚಿಯಲ್ಲಿ ನಡೆದಿದ್ದ ಅಂತರಾಷ್ಟ್ರೀಯ ಯೋಗ ದಿನದ ಸಾಮೂಹಿಕ ಯೋಗದಲ್ಲಿ ಭಾಗವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ 
2019 ಜೂನ್ 21ರಂದು ರಾಂಚಿಯಲ್ಲಿ ನಡೆದಿದ್ದ ಅಂತರಾಷ್ಟ್ರೀಯ ಯೋಗ ದಿನದ ಸಾಮೂಹಿಕ ಯೋಗದಲ್ಲಿ ಭಾಗವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ    

ನವದೆಹಲಿ: 8ನೇ ವರ್ಷದ ಅಂತರರಾಷ್ಟ್ರೀಯ ಯೋಗ ದಿನಾಚರಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ, ಜಾಗತಿಕ ಮಟ್ಟದಲ್ಲಿ ಯೋಗವು ಅದ್ಭುತ ಜನಪ್ರಿಯ ಪಡೆದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.

ಈ ಸಂಬಂಧ ಸೋಮವಾರ ಟ್ವೀಟ್ ಮಾಡಿದ ಅವರು, ‘ಜಾಗತಿಕ ನಾಯಕರು, ಸಿಇಒಗಳು, ಕ್ರೀಡಾಪಟುಗಳು ಮತ್ತು ನಟರು ನಿತ್ಯ ಯೋಗವನ್ನು ಅಭ್ಯಾಸ ಮಾಡುತ್ತಿದ್ದಾರೆ. ಅಲ್ಲದೆ, ಯೋಗ ತಮಗೆ ಹೇಗೆ ಸಹಾಯವಾಯಿತು ಎಂಬುದರ ಬಗ್ಗೆ ಮಾತನಾಡುತ್ತಿದ್ದಾರೆ’ ಎಂದು ಹೇಳಿದರು. ಜೊತೆಗೆ ಮೋದಿ ಅವರು ಯೋಗದ ಪ್ರಯೋಜನಗಳು ಸೇರಿದಂತೆ ಇನ್ನಿತರ ಮಹತ್ವದ ವಿಚಾರಗಳನ್ನು ಸಾರುವ ವಿಡಿಯೊವನ್ನು ಪೋಸ್ಟ್ ಮಾಡಿದರು.

ಜೂನ್ 21ರಂದು ಭಾರತ ಸೇರಿದಂತೆ ವಿಶ್ವದಾದ್ಯಂತ 8ನೇ ಅಂತರರಾಷ್ಟ್ರೀಯ ಯೋಗ ದಿನ ಆಚರಿಸಲಾಗುತ್ತದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.