ADVERTISEMENT

ಅಪರಾಧಗಳ ಬಗ್ಗೆ ಉತ್ತರ ಪ್ರದೇಶ ಸರ್ಕಾರದಿಂದ ಸುಳ್ಳು ಮಾಹಿತಿ: ಪ್ರಿಯಾಂಕಾ ಗಾಂಧಿ

ಪಿಟಿಐ
Published 3 ಮಾರ್ಚ್ 2021, 10:32 IST
Last Updated 3 ಮಾರ್ಚ್ 2021, 10:32 IST
ಪ್ರಿಯಾಂಕಾ ಗಾಂಧಿ
ಪ್ರಿಯಾಂಕಾ ಗಾಂಧಿ   

ನವದೆಹಲಿ: ‘ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಅಪರಾಧ ಪ್ರಕರಣಗಳ ಬಗ್ಗೆ ಯೋಗಿ ಆದಿತ್ಯನಾಥ ಸರ್ಕಾರ ಸುಳ್ಳು ಮಾಹಿತಿ ಪ್ರಚಾರ ಮಾಡುತ್ತಿದೆ‘ ಎಂದು ಆರೋಪಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ, ‘ಉತ್ತರ ಪ್ರದೇಶದಲ್ಲಿ ಅಪರಾಧ ಪ್ರಕರಣಗಳು ನಿರಂತರವಾಗಿ ಹೆಚ್ಚಾಗುತ್ತಿದ್ದು, ಪ್ರತಿ ನಿತ್ಯ ಒಂದು ಕುಟುಂಬ ಅಥವಾ ಇನ್ನೊಬ್ಬರು ನ್ಯಾಯಕ್ಕಾಗಿ ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ‘ ಎಂದು ವಾಗ್ದಾಳಿ ನಡೆಸಿದರು.

ಈ ಕುರಿತು ಹಿಂದಿಯಲ್ಲಿ ಟ್ವೀಟ್‌ ಮಾಡಿರುವ ಪ್ರಿಯಾಂಕಾ, ‘2018ರಲ್ಲಿ ಹತ್ರಾಸ್‌ನಲ್ಲಿ ಮಗಳ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ವಿರುದ್ಧ ತಂದೆ ದೂರು ದಾಖಲಿಸಿದ್ದರು. ಪ್ರಕರಣದಲ್ಲಿ ಜೈಲು ಸೇರಿದ್ದ ಆರೋಪಿ ಮಂಗಳವಾರ ಜಾಮೀನಿನ ಮೇಲೆ ಹೊರಬಂದು, ದೂರು ಕೊಟ್ಟಿದ್ದತಂದೆಯನ್ನು ಹತ್ಯೆ ಮಾಡಿದ್ದಾನೆ‘ ಎಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

‌‘ಅಪರಾಧ ವಿಚಾರದಲ್ಲಿ ಉತ್ತರ ಪ್ರದೇಶ ಸರ್ಕಾರ ಸುಳ್ಳು ಮಾಹಿತಿ ಪ್ರಚಾರ ಮಾಡುತ್ತಿದೆ. ಪ್ರತಿದಿನ ಒಂದು ಕುಟುಂಬ ಅಥವಾ ಒಬ್ಬ ವ್ಯಕ್ತಿ ನ್ಯಾಯಕ್ಕಾಗಿ ಸರ್ಕಾರವನ್ನು ಆಗ್ರಹಿಸುತ್ತಿದ್ದಾರೆ‘ ಎಂದು ಅವರು ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ADVERTISEMENT

ಪ್ರಿಯಾಂಕಾ ಗಾಂಧಿ ಮತ್ತು ಇತರೆ ಕಾಂಗ್ರೆಸ್ ನಾಯಕರು ಉತ್ತರ ಪ್ರದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕುಸಿದಿದೆ ಎಂದು ಆದಿತ್ಯನಾಥ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.