ADVERTISEMENT

ಉತ್ತರ ಪ್ರದೇಶ: ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಸಿಎಂ ಯೋಗಿ ಆದಿತ್ಯನಾಥ

ಪಿಟಿಐ
Published 15 ಸೆಪ್ಟೆಂಬರ್ 2025, 7:26 IST
Last Updated 15 ಸೆಪ್ಟೆಂಬರ್ 2025, 7:26 IST
   

ಲಖನೌ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಸೋಮವಾರ ತಮ್ಮ ಅಧಿಕೃತ ನಿವಾಸದಲ್ಲಿ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಾಮಾನ್ಯ ಜನರ ಸಮಸ್ಯೆಗಳನ್ನು ಆಲಿಸಿದರು. ಅವರೊಂದಿಗೆ ಸಂವಾದ ನಡೆಸಿದರು.

ಜನತಾ ದರ್ಶನದಲ್ಲಿ 50ಕ್ಕೂ ಅಧಿಕ ಜನರನ್ನು ಮುಖ್ಯಮಂತ್ರಿ ಭೇಟಿಯಾದರು. ಹೆಚ್ಚಿನ ಜನರು ವೈದ್ಯಕೀಯ ನೆರವನ್ನು ಕೋರಿದ್ದು, ಈ ವೇಳೆ ಬಂದ ಸಮಸ್ಯೆಗಳನ್ನು ಆದಷ್ಟು ಬೇಗ ಬಗೆಹರಿಸುವುದಾಗಿ ಆಶ್ವಾಸನೆ ನೀಡಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಂದೆಯ ಆರೋಗ್ಯ ಸಮಸ್ಯೆಯನ್ನು ಹೇಳಿಕೊಂಡ ರಾಯ್‌ಬರೇಲಿ ಮೂಲದ ಯುವಕನಿಗೆ, ‘ಸರ್ಕಾರವೇ ನಿಮ್ಮ ತಂದೆಯ ಚಿಕಿತ್ಸೆಯ ವೆಚ್ಚವನ್ನು ಭರಿಸಲಿದೆ’ ಎಂದು ಯೋಗಿ ಆದಿತ್ಯನಾಥ ಆಶ್ವಾಸನೆ ನೀಡಿದ್ದಾರೆ.

ADVERTISEMENT

ಕಳೆದ ಎಂಟು ವರ್ಷಗಳಿಂದ ನಮ್ಮ ಸರ್ಕಾರವು ಅಗತ್ಯವಿರುವ ರೋಗಿಗಳಿಗೆ ಹಣಕಾಸಿನ ನೆರವು ನೀಡುತ್ತಿದೆ. ಅದನ್ನು ಮುಂದುವರೆಸಿಕೊಂಡು ಹೋಗುತ್ತೇವೆ ಎಂದು ತಿಳಿಸಿದ್ದಾರೆ.

ಜನತಾ ದರ್ಶನದ ವೇಳೆ ಪುಟ್ಟ ಮಕ್ಕಳಿಗೆ ಚಾಕೋಲೇಟ್‌ ನೀಡುವ ಮೂಲಕ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಗಮನಸೆಳೆದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.