ADVERTISEMENT

ಉದ್ದೇಶಪೂರ್ವಕ ಭಯ ಸೃಷ್ಟಿಸುವವರ ವಿರುದ್ಧ ಕ್ರಮ: ಯೋಗಿ ಆದಿತ್ಯನಾಥ್‌

​ಪ್ರಜಾವಾಣಿ ವಾರ್ತೆ
Published 25 ಏಪ್ರಿಲ್ 2021, 16:17 IST
Last Updated 25 ಏಪ್ರಿಲ್ 2021, 16:17 IST
ಯೋಗಿ ಆದಿತ್ಯನಾಥ್‌
ಯೋಗಿ ಆದಿತ್ಯನಾಥ್‌   

ಲಖನೌ: ‘ರಾಜ್ಯದಲ್ಲಿ ಕೆಲವರು ಉದ್ದೇಶಪೂರ್ವಕವಾಗಿ ಭಯದ ವಾತಾವರಣ ಸೃಷ್ಟಿಸುತ್ತಿದ್ದಾರೆ. ಈ ರೀತಿಯ ಭಯ ಹುಟ್ಟಿಸುವವರ ವಿರುದ್ಧ ಕ್ರಮಕೈಗೊಳ್ಳಲಾಗುವುದು’ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ ಕೋವಿಡ್‌–19 ಪ್ರಕರಣಗಳು ಹೆಚ್ಚುತ್ತಿರುವುದು ಮತ್ತು ಆಮ್ಲಜನಕ ಕೊರತೆಯಾಗುತ್ತಿರುವ ಹಿನ್ನೆಲೆಯಲ್ಲಿ ಯೋಗಿ ಆದಿತ್ಯನಾಥ್‌ ಅವರು ಈ ಹೇಳಿಕೆ ನೀಡಿದ್ದಾರೆ.

‘ಸಾಮಾಜಿಕ ಮಾಧ್ಯಮಗಳ ಮೂಲಕ ತಪ್ಪು ದಾರಿಗೆಳೆಯುವ ಸಂದೇಶಗಳನ್ನು ಬಿತ್ತರಿಸಲಾಗುತ್ತಿದೆ. ಇಂತಹ ಜನರನ್ನು ಗುರುತಿಸುವ ಕಾರ್ಯ ನಡೆಯಬೇಕಾಗಿದೆ. ಪ್ರಸ್ತುತ ಬಿಕ್ಕಟ್ಟಿನ ಪರಿಸ್ಥಿತಿಯಲ್ಲಿ ಜನರ ತಾಳ್ಮೆಯನ್ನು ಪರೀಕ್ಷಿಸಲಾಗುತ್ತಿದೆ’ ಎಂದು ರಾಮಚರಿತ ಮಾನಸದಲ್ಲಿನ ಕೆಲವು ಅಂಶಗಳನ್ನು ಅವರು ಉಲ್ಲೇಖಿಸಿದ್ದಾರೆ.

‘ಕೋವಿಡ್‌–19ನಿಂದ ಸಾವಿಗೀಡಾಗುವವರ ಅಂತ್ಯಕ್ರಿಯೆ ನಡೆಸಲು ಯಾವುದೇ ರೀತಿ ಶುಲ್ಕ ಪಡೆಯುವುದಿಲ್ಲ. ರಾಜ್ಯದಲ್ಲಿನ ಆಮ್ಲಜನಕ ಲಭ್ಯತೆಯ ಬಗ್ಗೆ ಲೆಕ್ಕಪರಿಶೋಧನೆ ಮಾಡಲಾಗುತ್ತಿದೆ. ರಾಜ್ಯದಲ್ಲಿ ಆಮ್ಲಜನಕದ ಕೊರತೆ ಇಲ್ಲ. ಆದರೆ,ಕೆಲವರು ಕಾಳಸಂತೆಯಲ್ಲಿ ಆಮ್ಲಜನಕ ಮಾರಾಟ ಮಾಡುವ ಪ್ರಯತ್ನ ನಡೆಯುತ್ತಿದೆ’ ಎಂದು ದೂರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.