
ಪ್ರಜಾವಾಣಿ ವಾರ್ತೆ
ಪಟ್ನಾ: ‘ಪ್ರಧಾನಿ ನರೇಂದ್ರ ಮೋದಿ ಅವರಿಂದಾಗಿ ನಾವು ಜೀವಂತವಾಗಿ ಇದ್ದೀವಿ’ ಎಂದು ಬಿಹಾರದ ಸಚಿವರಾಮ್ ಸೂರತ್ ರಾಯ್ ಪ್ರತಿಪಾದಿಸಿದ್ದು, ಈ ಕುರಿತ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಹಂಚಿಕೆಯಾಗಿದೆ.
ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಕೋವಿಡ್ ಪರಿಸ್ಥಿತಿಯ ನಿರ್ವಹಣೆ ಕ್ರಮವನ್ನು ಉಲ್ಲೇಖಿಸಿ ಮಾತನಾಡಿದರು. ‘ಮೋದಿ ಅವರಿಂದಾಗಿ ದೊರೆತ ಲಸಿಕೆ ನಮ್ಮನ್ನು ರಕ್ಷಿಸಿದೆ. ಅವರು ದೇಶದ ಆರ್ಥಿಕತೆಯನ್ನು ಚೆನ್ನಾಗಿ ನಿರ್ವಹಣೆ ಮಾಡಿದ್ದಾರೆ’ ಎಂದು ಸಚಿವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.