ಬಂಧನ
(ಪ್ರಾತಿನಿಧಿಕ ಚಿತ್ರ)
ನವದೆಹಲಿ: ಯಾರನ್ನಾದರೂ ಅವರ ಸೈದ್ಧಾಂತಿಕ ವಿಚಾರಕ್ಕಾಗಿ ಜೈಲಿಗೆ ಹಾಕಲು ಆಗುವುದಿಲ್ಲ ಎಂದು ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ಪೊಲೀಸರಿಗೆ ಸುಪ್ರೀಂಕೋರ್ಟ್ ನಿನ್ನೆ ಜಾಡಿಸಿದೆ.
2022ರಲ್ಲಿ ಕೇರಳದಲ್ಲಿ ನಡೆದಿದ್ದ ಆರ್‌ಎಸ್‌ಎಸ್ ಕಾರ್ಯಕರ್ತ ಶ್ರೀನಿವಾಸನ್ ಅವರ ಹತ್ಯೆ ಪ್ರಕರಣದ ಆರೋಪಿಯ ಜಾಮೀನು ಅರ್ಜಿಯ ವಿಚಾರಣೆ ವೇಳೆ ಕೋರ್ಟ್ ಎನ್‌ಐಎ ಮೇಲೆ ಅಸಮಾಧಾನ ವ್ಯಕ್ತಪಡಿಸಿತು.
ಇತ್ತೀಚೆಗೆ ಸೈದ್ಧಾಂತಿಕ ವಿಚಾರಕ್ಕಾಗಿ ವ್ಯಕ್ತಿಗಳನ್ನು ಜೈಲಿಗೆ ಹಾಕುವ ಪ್ರವೃತ್ತಿ ಹೆಚ್ಚುತ್ತಿರುವುದನ್ನು ನಾವು ಗಮನಿಸುತ್ತಿದ್ದೇವೆ. ಆದರೆ, ಇದು ಸರಿಯಾದ ನಡವಳಿಕೆ ಅಲ್ಲ ಎಂದು ಶ್ರೀನಿವಾಸನ್ ಅವರ ಹತ್ಯೆ ಪ್ರಕರಣದ ಆರೋಪಿಗೆ ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡಿದೆ.
ನ್ಯಾಯಮೂರ್ತಿಗಳಾದ ಅಭಯ್ ಒಕಾ ಹಾಗೂ ಉಜ್ಜಲ್ ಭುಯಾನ್ ಅವರ ಪೀಠ ಜಾಮೀನು ಅರ್ಜಿಯ ವಿಚಾರಣೆ ನಡೆಸಿ, ಶ್ರೀನಿವಾಸನ್ ಹತ್ಯೆ ಪ್ರಕರಣದಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿರುವ ಆರೋಪಿಯ ನೇರ ಪಾತ್ರವಿಲ್ಲ. ಹೀಗಾಗಿ ಜಾಮೀನು ನೀಡಬಹುದು ಎಂದು ಆದೇಶ ನೀಡಿದೆ.
ಶ್ರೀನಿವಾಸನ್ ಹತ್ಯೆ ಪ್ರಕರಣವನ್ನು 2022 ಡಿಸೆಂಬರ್‌ನಲ್ಲಿ ಕೇಂದ್ರ ಸರ್ಕಾರ ಎನ್‌ಐಎಗೆ ವಹಿಸಿತ್ತು. ತನಿಖೆ ನಡೆಸಿದ್ದ ಎನ್‌ಐಎ, 26 ಪಿಎಫ್‌ಐ ಕಾರ್ಯಕರ್ತರನ್ನು ಬಂಧಿಸಿ ಜೈಲಿಗೆ ಕಳುಹಿಸಿತ್ತು. ಇದರಲ್ಲಿ 9 ಆರೋಪಿಗಳನ್ನು ಹೊರತುಪಡಿಸಿ ಉಳಿದ 17 ಆರೋಪಿಗಳಿಗೆ ಕೇರಳ ಹೈಕೋರ್ಟ್ 2024ರ ಜೂನ್‌ನಲ್ಲಿ ಜಾಮೀನು ಮಂಜೂರು ಮಾಡಿತ್ತು.
ಉಳಿದ 9 ಆರೋಪಿಗಳಲ್ಲಿ ಕೆಲವರು ಜಾಮೀನಿಗಾಗಿ ಸುಪ್ರೀಂಕೋರ್ಟ್‌ಗೆ ಮೊರೆ ಹೋಗಿದ್ದಾರೆ. ಇದರಲ್ಲಿ ಕೇರಳ ಪಿಎಫ್‌ಐ ಘಟಕದ ಪ್ರಧಾನ ಕಾರ್ಯದರ್ಶಿಯಾಗಿದ್ದ ಆರೋಪಿಗೆ ಜಾಮೀನು ಮಂಜೂರಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.