ಭೋಪಾಲ್: ಮಧ್ಯಪ್ರದೇಶದಲ್ಲಿ ವ್ಯಕ್ತಿಯೊಬ್ಬ ಯುವತಿಯ ಕುತ್ತಿಗೆ ಸೀಳಿ ಹತ್ಯೆ ಮಾಡಿ, ಆಕೆಯ ಮೃತದೇಹದ ಜೊತೆಗೆ ವಿಡಿಯೊ ಚಿತ್ರೀಕರಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಿದ್ದಾನೆ.
ಶಿಲ್ಪಾ ಝರಿಯಾ (25) ಮೃತ ಯುವತಿ. ಹತ್ಯೆ ಮಾಡಿದ ಆರೋಪಿಯನ್ನುಅಭಿಜಿತ್ ಪಾಟಿದಾರ್ ಎಂದು ಪೊಲೀಸರು ಗುರುತಿಸಿಸಿದ್ದಾರೆ. ಅವನ ಪತ್ತೆಗಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಜಬಲ್‌ಪುರದ ಮೇಖ್ಲಾ ರೆಸಾರ್ಟ್‌ನಲ್ಲಿ ಈ ಘಟನೆ ನಡೆದಿದೆ. ಯುವತಿಯ ಶವವನ್ನು ಪೊಲೀಸರು ವಶಪಡಿಸಿಕೊಂಡು ಪೋಷಕರಿಗೆ ಒಪ್ಪಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.