
ಬಿಎಸ್ಎಫ್
ಜೈಪುರ: ರಾಜಸ್ಥಾನದ ಜೈಸಲ್ಮೇರ್ ಜಿಲ್ಲೆಯಲ್ಲಿರುವ ಅಂತರರಾಷ್ಟ್ರೀಯ ಗಡಿ ದಾಟಿ ಪಾಕಿಸ್ತಾನಕ್ಕೆ ನುಸಳಲು ಯತ್ನಿಸಿದ ಆರೋಪದ ಮೇಲೆ 21 ವರ್ಷದ ಯುವಕನನ್ನು ಬಿಎಸ್‌ಎಫ್ ಬಂಧಿಸಿದೆ.
ಬಂಧಿತನನ್ನು ಪಂಕಜ್ ಕಶ್ಯಪ್ ಎಂದು ಗುರುತಿಸಲಾಗಿದೆ. ಈತ ಉತ್ತರ ಪ್ರದೇಶದ ಶಹಜಹಾನ್‌ಪುರದ ನಿವಾಸಿ. ಭಾನುವಾರ ಗಡಿಯ ಸಮೀಪ ಅನುಮಾನಾಸ್ಪದವಾಗಿ ಚಲಿಸುತ್ತಿರುವುದು ಕಂಡುಬಂದ ಹಿನ್ನೆಲೆ ಆತನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪ್ರಾಥಮಿಕ ವಿಚಾರಣೆಯ ಸಮಯದಲ್ಲಿ, ಕಶ್ಯಪ್ ಪಾಕಿಸ್ತಾನಕ್ಕೆ ಹೋಗಲು ಬಯಸುತ್ತಿರುವುದಾಗಿ ಬಹಿರಂಗಪಡಿಸಿದ್ದಾನೆ. ನಂತರ ಬಿಎಸ್ಎಫ್ ಆತನನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಪೊಲೀಸರಿಗೆ ಹಸ್ತಾಂತರಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಶ್ಯಪ್ ಯಾವ ಕಾರಣಕ್ಕೆ ಪಾಕಿಸ್ತಾನಕ್ಕೆ ತೆರಳಲು ಬಯಸಿದ್ದ ಮತ್ತು ಆತನ ಹಿನ್ನೆಲೆ ಏನು ಎಂದು ತಿಳಿಯಲು ಜಂಟಿ ವಿಚಾರಣಾ ಕೇಂದ್ರದಲ್ಲಿ (ಜೆಐಸಿ) ಭದ್ರತಾ ಸಂಸ್ಥೆಗಳು ವಿಚಾರಣೆಗೆ ಒಳಪಡಿಸಲಿವೆ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.