ADVERTISEMENT

ಈಶ್ವರಪ್ಪ ವಜಾಕ್ಕೆ ಆಗ್ರಹಿಸಿ, ಶಾ ಮನೆ ಮುಂದೆ ಯುವ ಕಾಂಗ್ರೆಸ್‌ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 13 ಏಪ್ರಿಲ್ 2022, 15:58 IST
Last Updated 13 ಏಪ್ರಿಲ್ 2022, 15:58 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ಸಂತೋಷ್ ಪಾಟೀಲ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಕೂಡಲೇ ಸಚಿವ ಸ್ಥಾನದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಬುಧವಾರ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ನಿವಾಸದ ಎದುರು ಪ್ರತಿಭಟನೆ ನಡೆಸಿದರು.

ಯುವ ಕಾಂಗ್ರೆಸ್‌ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸಂತೋಷ್‌ ಸಾವಿಗೆ ಈಶ್ವರಪ್ಪ ಕಾರಣ ಎಂದು ಘೋಷಣೆ ಕೂಗಿದರು.

’ಬಿಜೆಪಿಯ 40 ಪರ್ಸೆಂಟ್‌ ಸರ್ಕಾರದ ದುರಾಡಳಿತಕ್ಕೆ ಅದೇ ಪಕ್ಷದ ಕಾರ್ಯಕರ್ತನೊಬ್ಬ ಬಲಿಯಾಗಿದ್ದಾನೆ. ಈ ಬಗ್ಗೆ ರಾಜ್ಯದ ಮುಖ್ಯಮಂತ್ರಿ, ಪ್ರಧಾನಿ ಮತ್ತು ಕೇಂದ್ರ ಗೃಹ ಸಚಿವರು ಏಕೆ ಮೌನವಹಿಸಿದ್ದಾರೆ’ ಎಂದು ಶ್ರೀನಿವಾಸ್‌ ಪ್ರಶ್ನಿಸಿದ್ದಾರೆ.

ADVERTISEMENT

ಇವುಗಳನ್ನೂ ಓದಿ..

’ಈಶ್ವರಪ್ಪ ಅವರನ್ನು ತಕ್ಷಣವೇ ಬಂಧಿಸಿ ಸಚಿವ ಸಂಪುಟದಿಂದ ವಜಾಗೊಳಿಸಬೇಕು‘ ಎಂದು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.