ಸಾವು
(ಪ್ರಾತಿನಿಧಿಕ ಚಿತ್ರ)
ಆಳಪ್ಪುಳ: ಗದ್ದೆಯ ಬಳಿ ಮೀನು ಹಿಡಿಯಲು ತೆರಳಿದ್ದ ವೇಳೆ ಗಂಟಲಲ್ಲಿ ಮೀನು ಸಿಲುಕಿ ಯುವಕ ಮೃತಪಟ್ಟ ಘಟನೆ ಕೇರಳದ ಆಳಪ್ಪುಳ ಬಳಿಯ ಕಾಯಂಕುಳಂನಲ್ಲಿ ನಡೆದಿದೆ.
ಆದರ್ಶ್ ಅಲಿಯಾಸ್ ಉನ್ನಿ (25) ಮೃತ ಯುವಕ. ಗದ್ದೆಯ ಬಳಿ ಆದರ್ಶ್ ಸ್ನೇಹಿತರೊಂದಿಗೆ ಮೀನು ಹಿಡಿಯಲು ತೆರಳಿದ್ದರು. ಈ ವೇಳೆ ಬಾಯಲ್ಲಿ ಮೀನು ಕಚ್ಚಿಕೊಂಡು ಮತ್ತೊಂದು ಮೀನು ಹಿಡಿಯುವ ಪ್ರಯತ್ನ ಮಾಡಿದ್ದಾರೆ. ಆದರೆ ದುರದೃಷ್ಟವಶಾತ್ ಬಾಯಲ್ಲಿದ್ದ ಮೀನು ಗಂಟಲಲ್ಲಿ ಸಿಲುಕಿದೆ. ತಕ್ಷಣ ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಆದರ್ಶ್ ಬದುಕುಳಿಯಲಿಲ್ಲ. ಭಾನುವಾರ ಸಂಜೆ 4.30ರ ವೇಳೆಗೆ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಸೆಕ್ಷನ್ 194ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದೂ ಅವರು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.