ತಿರುವನಂತಪುರ: ಮಹಿಳೆಯೊಬ್ಬರ ಕುರಿತು ಅವಹೇಳನಕಾರಿ ವಿಷಯ ಪ್ರಸಾರ ಮಾಡಿದ ಆರೋಪದಡಿ ಯೂಟ್ಯೂಬರ್ ಒಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಾಮಾಜಿಕ ಮಾಧ್ಯಮದಲ್ಲಿ ತನ್ನ ಬಗ್ಗೆ ಅವಹೇಳನಕಾರಿ ವಿಷಯವನ್ನು ಪ್ರಸಾರ ಮಾಡಿರುವುದಾಗಿ ಆರೋಪಿಸಿ ಮಹಿಳೆಯೊಬ್ಬರು ಯೂಟ್ಯೂಬರ್ ಶಾಜನ್ ಸ್ಕರಿಯಾ ವಿರುದ್ಧ ದೂರು ದಾಖಲಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪ್ರಸ್ತುತ ಮಹಿಳೆ ವಿದೇಶದಲ್ಲಿ ವಾಸಿಸುತ್ತಿದ್ದಾರೆ. ಆಕೆಯ ದೂರನ್ನು ಆಧರಿಸಿ ಸ್ಕರಿಯಾ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ಸಿಆರ್‌ಪಿಸಿಯ ಸೆಕ್ಷನ್ 164ರ ಅಡಿಯಲ್ಲಿ ನ್ಯಾಯಾಲಯಕ್ಕೆ ಸ್ಕರಿಯಾ ವಿರುದ್ಧ ದೂರು ನೀಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಸ್ಕರಿಯಾ ಅವರನ್ನು ನ್ಯಾಯಾಲಯದ ಎದುರು ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.