ADVERTISEMENT

ಗುರುಗ್ರಾಮ: ಯುಟ್ಯೂಬರ್‌ ಎಲ್ವಿಶ್ ಯಾದವ್ ಮನೆ ಮೇಲೆ ಗುಂಡಿನ ದಾಳಿ

ಪಿಟಿಐ
Published 17 ಆಗಸ್ಟ್ 2025, 5:38 IST
Last Updated 17 ಆಗಸ್ಟ್ 2025, 5:38 IST
   

ಗುರುಗ್ರಾಮ: ಖ್ಯಾತ ಯುಟ್ಯೂಬರ್‌ ಎಲ್ವಿಶ್ ಯಾದವ್ ಅವರ ಸೆಕ್ಟರ್‌ 57ರ ಮನೆ ಮೇಲೆ ಬೈಕ್‌ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಭಾನುವಾರ ಬೆಳಿಗ್ಗೆ ದುಷ್ಕರ್ಮಿಗಳು ಮನೆಯ ಮೇಲೆ ಎರಡು ಡಜನ್ ಸುತ್ತು ಗುಂಡುಗಳನ್ನು ಹಾರಿಸಿದ್ದಾರೆ. ನಂತರ ಸ್ಥಳದಿಂದ ಪರಾರಿಯಾಗಿದ್ದಾರೆ.

ಘಟನೆ ನಡೆದಾಗ ಎಲ್ವಿಶ್ ಯಾದವ್ ಅವರು ಮನೆಯಲ್ಲಿರಲಿಲ್ಲ. ಅವರ ಕುಟುಂಬಸ್ಥರು ಮಾತ್ರ ಇದ್ದರು, ಯಾರಿಗೂ ಗಾಯವಾಗಿಲ್ಲ ಎಂದು ಹೇಳಿದ್ದಾರೆ.

ADVERTISEMENT

‘ಎಲ್ವಿಶ್ ಯಾದವ್ ಅವರಿಗೆ ಘಟನೆಗೂ ಮುನ್ನ ಯಾವುದೇ ರೀತಿಯ ಬೆದರಿಕೆ ಬಂದಿರಲಿಲ್ಲ. ಅವರು ಸದ್ಯ ಹರಿಯಾಣದ ಹೊರಗಿದ್ದಾರೆ’ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.

ಘಟನೆಯ ಕುರಿತು ಮಾಹಿತಿ ಪಡೆದ ನಂತರ ಸ್ಥಳಕ್ಕೆ ಆಗಮಿಸಿ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದು, ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ. ಹೆಚ್ಚಿನ ತನಿಖೆ ಮಾಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.