ADVERTISEMENT

ಪ್ರಿಯಾಂಕಾ ಗಾಂಧಿ ಬೆಂಗಾವಲು ವಾಹನ ತಡೆದ ಯೂಟ್ಯೂಬರ್ ಬಂಧನ, ಬಿಡುಗಡೆ

ಪಿಟಿಐ
Published 31 ಮಾರ್ಚ್ 2025, 6:09 IST
Last Updated 31 ಮಾರ್ಚ್ 2025, 6:09 IST
<div class="paragraphs"><p>ಬಂಧನ</p></div>

ಬಂಧನ

   

(ಪ್ರಾತಿನಿಧಿಕ ಚಿತ್ರ)

ತ್ರಿಶೂರ್ (ಕೇರಳ): ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಬೆಂಗಾವಲು ಪಡೆಗೆ ಅಡ್ಡಿಪಡಿಸಿದ ಆರೋಪದ ಮೇಲೆ ಯೂಟ್ಯೂಬರ್ ಒಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ADVERTISEMENT

ಘಟನೆಗೆ ಸಂಬಂಧಿಸಿದಂತೆ ಮನ್ನುತ್ತಿ ಪೊಲೀಸರು ಎಳನಾಡು ನಿವಾಸಿ ಅನೀಶ್ ಅಬ್ರಹಾಂ ಅವರನ್ನು ಕಸ್ಟಡಿಗೆ ಪಡೆದು ಬಳಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಶನಿವಾರ ರಾತ್ರಿ 9.30ರ ಸುಮಾರಿಗೆ ಪ್ರಿಯಾಂಕಾ ಅವರು ವಯನಾಡ್ ಮತ್ತು ಮಲಪ್ಪುರಂ ಜಿಲ್ಲೆಯಲ್ಲಿ ಹಲವಾರು ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಬಳಿಕ ಮಲಪ್ಪುರಂನ ವಂದೂರಿನಿಂದ ಕೊಚ್ಚಿ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುತ್ತಿದ್ದಾಗ ಮನ್ನುತ್ತಿ ಬೈಪಾಸ್ ಜಂಕ್ಷನ್‌ನಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಸಂಸದರ ಬೆಂಗಾವಲು ವಾಹನದ ಹಾರ್ನ್ ಶಬ್ದದಿಂದ ಕೋಪಗೊಂಡ ಆರೋಪಿಯು ಬೆಂಗಾವಲು ಪಡೆಯ ಮುಂದೆ ತನ್ನ ಕಾರನ್ನು ಅಡ್ಡ ನಿಲ್ಲಿಸಿದ್ದಾನೆ. ಮನ್ನುತ್ತಿ ಸಬ್ ಇನ್ಸ್‌ಪೆಕ್ಟರ್ ನೇತೃತ್ವದ ಪೊಲೀಸ್ ತಂಡವು ಕಾರನ್ನು ತೆಗೆಯುವಂತೆ ಸೂಚಿಸಿದಾಗ ಆತನ ವಾಗ್ವಾದಕ್ಕೆ ಮುಂದಾಗಿದ್ದಾನೆ ಎಂದು ವರದಿಯಾಗಿದೆ.

ಉದ್ದೇಶಪೂರ್ವಕವಾಗಿ ಬೆಂಗಾವಲು ವಾಹನ ತಡೆದು, ಜೀವಕ್ಕೆ ಅಪಾಯವನ್ನುಂಟು ಮಾಡುವುದು ಮತ್ತು ಪೊಲೀಸ್ ನಿರ್ದೇಶನಗಳನ್ನು ಪಾಲಿಸದಿರುವ ಆರೋಪದ ಮೇಲೆ ಆತನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.