ವಿಡಿಯೊ ಮಾಡಲು ಭೋರ್ಗರೆವ ನೀರಿನ ಮಧ್ಯೆ ಹೋಗಿ ಕೊಚ್ಚಿ ಹೋದ ಯುಟ್ಯೂಬರ್
ಕೊರಾಪುಟ್: ಒಡಿಶಾದ ಕೊರಾಪುಟ್ ಜಿಲ್ಲೆಯ ದುಡುಮಾ ಜಲಪಾತದಲ್ಲಿ ಭೋರ್ಗರೆವ ನೀರಿನ ಮಧ್ಯೆ ನಿಂತು ವಿಡಿಯೊ ಮಾಡಲು ಹೋಗಿದ್ದ ವ್ಯಕ್ತಿಯೊಬ್ಬ ನೀರಿನ ರಭಸಕ್ಕೆ ಕೊಚ್ಚಿ ಹೋದ ಘಟನೆ ಶನಿವಾರ ನಡೆದಿದೆ.
ಈತನನ್ನು ಸಾಗರ್ ತುಡು ಎಂದು ಗುರುತಿಸಲಾಗಿದ್ದು, ಈತ ಯುಟ್ಯೂಬರ್ ಆಗಿದ್ದಾನೆ. ಬೆರಾಮ್ಪುರ ನಿವಾಸಿಯಾಗಿರುವ ಈತ ಸ್ನೇಹಿತರೊಂದಿಗೆ ಜಲಪಾತಕ್ಕೆ ಬಂದ ಸಂದರ್ಭದಲ್ಲಿ ದುರಂತ ನಡೆದಿದೆ ಎಂದು ವರದಿಯಾಗಿದೆ.
ನೀರಿನ ಮಧ್ಯೆ ಸಾಗರ್ ನಿಂತಿದ್ದು, ಡ್ರೋನ್‌ನಲ್ಲಿ ವಿಡಿಯೊ ರೆಕಾರ್ಡ್ ಮಾಡಲಾಗುತ್ತಿತ್ತು, ಈ ವೇಳೆ ಏಕಾಏಕಿ ನೀರಿನ ಮಟ್ಟ ಹೆಚ್ಚಳವಾಗಿದ್ದು, ಕಾಲುಜಾರಿ ಬಿದ್ದು ನೀರಿನಲ್ಲಿ ಕೊಚ್ಚಿಹೋಗಿದ್ದಾರೆ. ಈ ದೃಶ್ಯ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ.
ಸ್ಥಳದಲ್ಲಿದ್ದ ಪ್ರವಾಸಿಗರು, ಸ್ಥಳೀಯರು ಸಾಗರ್ ಅವರನ್ನು ರಕ್ಷಿಸಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ ಎಂದು ಪ್ರತ್ಯಕ್ಷದರ್ಶಿಗಳ ಹೇಳಿಕೆ ಉಲ್ಲೇಖಿಸಿ ಎನ್‌ಡಿಟಿವಿ ವರದಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.