ADVERTISEMENT

ತೆಲುಗು ದೇಶಂ ಪಕ್ಷದ ಮಾನ್ಯತೆ ರದ್ದುಪಡಿಸಲು ವೈಎಸ್‌ಆರ್‌ಸಿಪಿ ಪಕ್ಷ ಕೋರಿಕೆ

ರಾಷ್ಟ್ರಪತಿ ಭೇಟಿ ಮಾಡಿದ ವೈಎಸ್‌ಆರ್‌ಸಿಪಿ ನಿಯೋಗ

ಪಿಟಿಐ
Published 2 ನವೆಂಬರ್ 2021, 11:04 IST
Last Updated 2 ನವೆಂಬರ್ 2021, 11:04 IST
ವೈ.ಎಸ್. ಜಗನ್‌ಮೋಹನ್ ರೆಡ್ಡಿ
ವೈ.ಎಸ್. ಜಗನ್‌ಮೋಹನ್ ರೆಡ್ಡಿ   

ನವದೆಹಲಿ: ಆಂಧ್ರಪ್ರದೇಶದ ಆಡಳಿತಾರೂಢ ವೈಎಸ್‌ಆರ್‌ಸಿಪಿ ಪಕ್ಷದ ನಿಯೋಗವು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರನ್ನು ಭೇಟಿ ಮಾಡಿ ತೆಲುಗು ದೇಶಂ ಪಕ್ಷದ (ಟಿಡಿಪಿ)ಮಾನ್ಯತೆಯನ್ನು ರದ್ದುಪಡಿಸಬೇಕೆಂದು ಕೋರಿದೆ.

ಆಂಧ್ರದ ಮುಖ್ಯಮಂತ್ರಿ ವೈ.ಎಸ್. ಜಗನ್‌ಮೋಹನ್ ರೆಡ್ಡಿ ಅವರ ವಿರುದ್ಧ ಟಿಡಿಪಿಯ ನಾಯಕರು ನಿಂದನೀಯ ಭಾಷೆ ಬಳಸಿದ್ದಾರೆ. ಈ ಕಾರಣಕ್ಕಾಗಿ ಟಿಡಿಪಿಯ ಮಾನ್ಯತೆ ರದ್ದುಪಡಿಸಬೇಕೆಂದು ವೈಎಸ್‌ಆರ್‌ಸಿಪಿ ನಿಯೋಗವು ಒತ್ತಾಯಿಸಿದೆ.

‘ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳಿಗೆ ನಿರ್ದಿಷ್ಟವಾಗಿ ದಂಡ ವಿಧಿಸುವ ನ್ಯಾಯಾಂಗ ನಿಂದನೆ ಕಾಯ್ದೆಯಂತಹ ಕಾನೂನನ್ನು ಸಂಸತ್ತಿನಲ್ಲಿ ರೂಪಿಸುವಂತೆ ಕೇಂದ್ರ ಕಾನೂನು ಸಚಿವಾಲಯಕ್ಕೆ ನಿರ್ದೇಶನ ನೀಡಬೇಕು’ ಎಂದುಪಕ್ಷದ ನಿಯೋಗದ ನೇತೃತ್ವ ವಹಿಸಿದ್ದ ವೈಎಸ್‌ಆರ್‌ಸಿಪಿ ಪ್ರಧಾನ ಕಾರ್ಯದರ್ಶಿ ವಿ. ವಿಜಯ್ ಸಾಯಿರೆಡ್ಡಿ ಅವರು ರಾಷ್ಟ್ರಪತಿ ಅವರನ್ನು ಒತ್ತಾಯಿಸಿದ್ದಾರೆ.

ADVERTISEMENT

ಟಿಡಿಪಿಯ ಮಾನ್ಯತೆಯನ್ನು ರದ್ದುಗೊಳಿಸುವಂತೆ ಕೋರಿ ಅ. 28ರಂದು ಕೇಂದ್ರ ಚುನಾವಣಾ ಆಯೋಗಕ್ಕೆ ವೈಎಸ್‌ಆರ್‌ಸಿಪಿ ದೂರು ನೀಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.