ADVERTISEMENT

ವ‌ಕ್ಫ್ ತಿದ್ದುಪಡಿ ಕಾಯ್ದೆ: ಸಿಂಧುತ್ವ ಪ್ರಶ್ನಿಸಿ ‘ಸುಪ್ರೀಂ’ಗೆ YSRCP

ಪಿಟಿಐ
Published 14 ಏಪ್ರಿಲ್ 2025, 16:38 IST
Last Updated 14 ಏಪ್ರಿಲ್ 2025, 16:38 IST
<div class="paragraphs"><p>ಸುಪ್ರೀಂ ಕೋರ್ಟ್</p></div>

ಸುಪ್ರೀಂ ಕೋರ್ಟ್

   

ಅಮರಾವತಿ: ವ‌ಕ್ಫ್ ತಿದ್ದುಪಡಿ ಕಾಯ್ದೆ 2025ರ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ವೈಎಸ್‌ಆರ್‌ಸಿಪಿ ಪಕ್ಷವು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.

ಈ ಕಾಯ್ದೆಯು ಸಂವಿಧಾನದ ಪ್ರಮುಖ ಆಶಯಗಳನ್ನು ಉಲ್ಲಂಘಿಸುತ್ತದೆ ಮತ್ತು ಮುಸ್ಲಿಂ ಸಮುದಾಯದ ಹಿತಾಸಕ್ತಿ ಕಾಪಾಡುವಲ್ಲಿ ವಿಫಲವಾಗಿದೆ ಎಂದು ಪಕ್ಷ ವಾದಿಸಿದೆ.

ADVERTISEMENT

ಕಾಯ್ದೆಯು ಭಾರತೀಯ ಸಂವಿಧಾನದ 13, 14, 25 ಮತ್ತು 26ನೇ ವಿಧಿಗಳ ಅಡಿಯಲ್ಲಿ ಖಾತ್ರಿಪಡಿಸಲಾದ ಮೂಲಭೂತ ಹಕ್ಕುಗಳಾದ ಕಾನೂನಿನ ಮುಂದೆ ಸಮಾನತೆ, ಧಾರ್ಮಿಕ ಸ್ವಾತಂತ್ರ್ಯ ಮತ್ತು ಧಾರ್ಮಿಕ ಕಾರ್ಯಕ್ರಮಗಳನ್ನು ಕೈಗೊಳ್ಳಲು ಇರುವ ಸ್ವಾಯತ್ತತೆಯನ್ನು ಉಲ್ಲಂಘಿಸುತ್ತದೆ ಎಂದು ವೈಎಸ್‌ಆರ್‌ಸಿಪಿ ಹೇಳಿದೆ.

ಕಾಯ್ದೆಯ ಸೆಕ್ಷನ್ 9 ಮತ್ತು 14ರ ಅಡಿಯಲ್ಲಿ ಮುಸ್ಲಿಮೇತರ ಸದಸ್ಯರನ್ನು ಸೇರಿಸುವುದು ವಕ್ಫ್ ಮಂಡಳಿಗಳ ಆಂತರಿಕ ಕಾರ್ಯಚಟುವಟಿಕೆಗೆ ಅಡ್ಡಿಪಡಿಸುತ್ತದೆ ಮತ್ತು ಅವುಗಳ ಧಾರ್ಮಿಕ ಸ್ವರೂಪವನ್ನು ದುರ್ಬಲಗೊಳಿಸುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಧಾರ್ಮಿಕ ಸಂಸ್ಥೆಗಳು ಆಡಳಿತಾತ್ಮಕ ಸ್ವಾತಂತ್ರ್ಯ ಹೊಂದಿರಬೇಕು. ಬಾಹ್ಯ ಹಸ್ತಕ್ಷೇಪವು ಕೋಮು ಸಾಮರಸ್ಯ ಮತ್ತು ಸಾಂವಿಧಾನಿಕ ಭದ್ರತೆಯನ್ನು ಹಾಳು ಮಾಡಬಹುದು ಎಂದು ಪಕ್ಷ ವಾದಿಸಿದೆ.

ಏಪ್ರಿಲ್ 4ರಂದು ವಕ್ಫ್ ತಿದ್ದುಪಡಿ ಮಸೂದೆಯನ್ನು ಸಂಸತ್ ಅನುಮೋದಿಸಿತ್ತು. 5ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಮಸೂದೆಯನ್ನು ಅಂಗೀಕರಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.