ಗುವಾಹಟಿ: ಗಾಯಕ ಜುಬೀನ್ ಗರ್ಗ್ ಸಾವಿನ ಪ್ರಕರಣದ ತನಿಖೆಯ ಭಾಗವಾಗಿ ಅಸ್ಸಾಂನ ಅಪರಾಧ ತನಿಖಾ ವಿಭಾಗದ (ಸಿಐಡಿ) ಅಧಿಕಾರಿಗಳು ಸೋಮವಾರ ಸಿಂಗಪುರಕ್ಕೆ ತೆರಳಲಿದ್ದಾರೆ. ಇದಕ್ಕೆ ಸಂಬಂಧಿಸಿದ ಸಿದ್ಧತೆಗಳನ್ನೆಲ್ಲಾ ಪೂರ್ಣಗೊಳಿಸಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ವಿಶೇಷ ತನಿಖಾ ತಂಡವು (ಎಸ್‌ಐಟಿ) ಗರ್ಗ್ ಸಾವಿನ ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದು, ಈ ತಂಡವನ್ನು ಡಿಜಿಪಿ ಮುನ್ನಾ ಪ್ರಸಾದ್ ಗುಪ್ತಾ ಅವರು ಮುನ್ನಡೆಸುತ್ತಿದ್ದಾರೆ. ಇದೀಗ ಇದೇ ತಂಡ ಸಿಂಗಪುರಕ್ಕೆ ಭೇಟಿ ನೀಡುತ್ತಿದೆ.
ಈ ಬಗ್ಗೆ ಗುಪ್ತಾ ಮಾತನಾಡಿ, ‘ಈಗಾಗಲೇ ಸಿಂಗಪುರ ಭೇಟಿಗೆ ಅಗತ್ಯವಿರುವ ಸಿದ್ಧತೆಗಳನ್ನು ಮಾಡಿಕೊಂಡಿದ್ದೇವೆ. ಅಲ್ಲಿನ ಆಡಳಿತ ನಿಗದಿಪಡಿಸಿದ ಸಮಯಕ್ಕೆ ನಾವು ಅಲ್ಲಿಗೆ ತೆರಳಿ, ಮುಂದಿನ ತನಿಖೆ ನಡೆಸಲಿದ್ದೇವೆ’ ಎಂದಿದ್ದಾರೆ.
ಕಾರ್ಯಕ್ರಮವೊಂದರ ನಿಮಿತ್ತ ಸಿಂಗಾಪುರಕ್ಕೆ ತೆರಳಿದ್ದ ಗರ್ಗ್, ಸೆಪ್ಟೆಂಬರ್ 19ರಂದು ಸ್ಕೂಬಾ ಡೈವಿಂಗ್ ವೇಳೆ ಮೃತಪಟ್ಟಿದ್ದರು. ಅವರ ಸಾವಿಗೆ ಸಂಬಂಧಿಸಿದಂತೆ ಈಗಾಗಲೇ 7 ಮಂದಿಯನ್ನು ಬಂಧಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.