ADVERTISEMENT

ಜುಬೀನ್ ಬೆಂಬಲಿಸಿ ಹಿಂಸಾಚಾರ: 9 ಜನರ ಬಂಧನ

ಪಿಟಿಐ
Published 18 ಅಕ್ಟೋಬರ್ 2025, 11:47 IST
Last Updated 18 ಅಕ್ಟೋಬರ್ 2025, 11:47 IST
<div class="paragraphs"><p>ಬಂಧನ</p></div>

ಬಂಧನ

   

(ಪ್ರಾತಿನಿಧಿಕ ಚಿತ್ರ)

ಗುವಾಹಟಿ: ಗಾಯಕ ಜುಬೀನ್ ಗರ್ಗ್ ಸಾವು ಪ್ರಕರಣದ ಐವರು ಆರೋಪಿಗಳನ್ನು ಅಸ್ಸಾಂನ ಬಾಕ್ಸಾ ಜಿಲ್ಲೆಯ ಜೈಲಿಗೆ ಸ್ಥಳಾಂತರಿಸುವ ವೇಳೆ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಈವರೆಗೆ ಒಂಬತ್ತು ಜನರನ್ನು ಬಂಧಿಸಲಾಗಿದೆ ಎಂದು ಶನಿವಾರ ಪೊಲೀಸರು ತಿಳಿಸಿದ್ದಾರೆ.

ADVERTISEMENT

ಹಿಂಸಾಚಾರದಲ್ಲಿ ಭಾಗವಹಿಸಿದ ಇತರರನ್ನು ಗುರುತಿಸಲಾಗಿದ್ದು, ಅವರ ಬಂಧನಕ್ಕಾಗಿ ಶೋಧ ನಡೆಯುತ್ತಿದೆ ಎಂದು ಬಾಕ್ಸಾ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಉಜ್ಜಲ್ ಪ್ರತಿಮ್ ಬರುವಾ ಹೇಳಿದ್ದಾರೆ.

‘ಈವರೆಗೆ ನಾವು 9 ಜನರನ್ನು ಬಂಧಿಸಿದ್ದೇವೆ. ಇನ್ನೂ ಹಲವರನ್ನು ಗುರುತಿಸಲಾಗಿದೆ. ಕೆಲವು ಆರೋಪಿಗಳು ತಲೆಮರೆಸಿಕೊಂಡಿದ್ದು,  ಅವರನ್ನು ಶೀಘ್ರದಲ್ಲೇ ಬಂಧಿಸಲಿದ್ದೇವೆ. ಈ ತನಿಖೆಯನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ ಮತ್ತು ತಂಡವೊಂದು ಅದನ್ನು ಮುಂದಕ್ಕೆ ಕೊಂಡೊಯ್ಯುತ್ತಿದೆ’ ಎಂದು ಅವರು ಹೇಳಿದ್ದಾರೆ. 

ಜುಬೀನ್ ಸಾವು ಪ್ರಕರಣದ ಐವರು ಆರೋಪಿಗಳನ್ನು ಗುವಾಹಟಿ ಕೋರ್ಟ್‌ ಬುಧವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಆರೋಪಿಗಳನ್ನು ಕರೆತಂದಾಗ ಬಾಕ್ಸಾ ಜೈಲಿನ ಬಳಿ ಹಿಂಸಾತ್ಮಕ ಪ್ರತಿಭಟನೆಗಳು ನಡೆದಿದ್ದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.