ಜುಬೀನ್ ಗರ್ಗ್
ಗುವಾಹಟಿ: ಅಸ್ಸಾಂನ ಗುವಾಹಟಿಯಲ್ಲಿ ಕುಟುಂಬಸ್ಥರು, ಪ್ರೀತಿಪಾತ್ರರ ಸಮ್ಮುಖದಲ್ಲಿ ಸರ್ಕಾರಿ ಗೌರವದೊಂದಿಗೆ ಜನಪ್ರಿಯ ಗಾಯಕ ಜುಬೀನ್ ಗರ್ಗ್ ಅವರ ಅಂತ್ಯಸಂಸ್ಕಾರ ನಡೆಯಿತು.
ಗರ್ಗ್ ಅಂತ್ಯಸಂಸ್ಕಾರ ನಡೆಯುವ ಸ್ಥಳದಲ್ಲಿ ಅಪಾರ ಸಂಖ್ಯೆಯಲ್ಲಿ ಜನ ಸೇರಿದ್ದು, ‘ಜುಬೀನ್‌ಗೆ ಜಯವಾಗಲಿ’, ‘ಜುಬೀನ್ ದೀರ್ಘಕಾಲ ಉಳಿಯಲಿ’ ಎಂಬ ಘೋಷಣೆಗಳು ಮೊಳಗಿದವು. ಇನ್ನೂ ಕೆಲವರು ಗರ್ಗ್ ಅವರ ಹಾಡನ್ನು ಹಾಡಿ ಪ್ರೀತಿಯ ಗಾಯಕನಿಗೆ ಅಂತಿಮ ನಮನ ಸಲ್ಲಿಸಿದ್ದಾರೆ.
ಗರ್ಗ್ ಸಾವಿನ ಹಿಂದೆ ಯಾವುದೇ ಅಪರಾಧ ಕೃತ್ಯಗಳು ನಡೆದಿಲ್ಲ ಎಂದು ಖಚಿತಪಡಿಸಲು ಸರ್ಕಾರ ಮತ್ತೊಮ್ಮೆ ಮರಣೋತ್ತರ ಪರೀಕ್ಷೆ ನಡೆಸಲು ಸೂಚಿಸಿತ್ತು ಎಂದು ಮುಖ್ಯಮಂತ್ರಿ ಶರ್ಮಾ ತಿಳಿಸಿದ್ದಾರೆ.
2ನೇ ಬಾರಿ ಮರಣೋತ್ತರ ಪರೀಕ್ಷೆಯ ನಂತರ ಇಂದು ಅಂತ್ಯಕ್ರಿಯೆ ನಡೆಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.