ಗುವಾಹಟಿ: ಜನಪ್ರಿಯ ಗಾಯಕ ಜುಬೀನ್ ಗರ್ಗ್ ಅವರ ಮರಣೋತ್ತರ ಪರೀಕ್ಷೆಯನ್ನು ಮತ್ತೊಮ್ಮೆ ಮಂಗಳವಾರ ಬೆಳಿಗ್ಗೆ ನಡೆಸಲಾಗುವುದು ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮ ಅವರು ಹೇಳಿದ್ದಾರೆ.
ಗರ್ಗ್ ಅವರು ಸೆ.19ರಂದು ಸಿಂಗಪುರದಲ್ಲಿ ಸ್ಕೂಬಾ ಡೈವಿಂಗ್ ಮಾಡುತ್ತಿದ್ದ ವೇಳೆ ಮೃತಪಟ್ಟಿದ್ದರು. ಅವರ ಮರಣೋತ್ತರ ಪರೀಕ್ಷೆಯನ್ನು ಅಲ್ಲಿಯೇ ನಡೆಸಿ ಬಳಿಕ ಮೃತದೇಹವನ್ನು ಭಾರತಕ್ಕೆ ತರಲಾಗಿತ್ತು. ಗುವಾಹಟಿ ವೈದ್ಯಕೀಯ ಕಾಲೇಜಿನಲ್ಲಿ ಮತ್ತೆ ಮರಣೋತ್ತರ ಪರೀಕ್ಷೆ ನಡೆಯಲಿದೆ.
‘ಮರು ಮರಣೋತ್ತರ ಪರೀಕ್ಷೆಗೆ ಸಾರ್ವಜನಿಕರು ಬೇಡಿಕೆ ಇಟ್ಟಿರಲಿಲ್ಲ. ಆದರೆ ಕೆಲವು ಸಮಾಜಘಾತುಕ ಗುಂಪುಗಳ ಒತ್ತಾಯದ ಮೇರೆಗೆ ಜುಬೀನ್ ಅವರ ಪತ್ನಿಯ ಅನುಮತಿಯೊಂದಿಗೆ ಮರುಪರೀಕ್ಷೆ ನಡೆಸಲಾಗುತ್ತಿದೆ’ ಎಂದು ಹಿಮಂತ ಅವರು ಹೇಳಿದ್ದಾರೆ.
‘ಮತ್ತೊಮ್ಮೆ ಮರಣೋತ್ತರ ಪರೀಕ್ಷೆ ನಡೆಸುವುದು ಅಗತ್ಯವಿಲ್ಲ ಎಂದು ಎನಿಸುತ್ತದೆ. ಅವರೆಲ್ಲ ಪರಿಣತರಾಗಿರುತ್ತಾರೆ. ಆದರೆ ಜುಬೀನ್ ಸಾವಿನ ವಿಚಾರದಲ್ಲಿ ಯಾರೂ ರಾಜಕೀಯ ಮಾಡಲು ಅವಕಾಶ ನೀಡಬಾರದು ಎನ್ನುವ ಕಾರಣಕ್ಕೆ ಈ ಕ್ರಮ ಕೈಗೊಳ್ಳಲಾಗಿದೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.