ADVERTISEMENT

ಅಂತರ್ಜಾಲ ತಾಣ

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2012, 19:30 IST
Last Updated 1 ಅಕ್ಟೋಬರ್ 2012, 19:30 IST

ಬೆಂಗಳೂರು: ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ವೆಬ್‌ಸೈಟ್ ಅನ್ನು ಕಂದಾಯ ಸಚಿವರೂ ಆದ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಸೋಮವಾರ ವಿಧಾನಸೌಧದಲ್ಲಿ ಉದ್ಘಾಟಿಸಿದರು.

ರಾಜ್ಯದಲ್ಲಿ ಸಂಭವಿಸಬಹುದಾದ ಪ್ರಕೃತಿ ವಿಕೋಪಗಳನ್ನು ತಡೆಗಟ್ಟಲು ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳು ಮತ್ತು ಸಂಭವಿಸಿದ ನಂತರ ಕೈಗೊಳ್ಳಬೇಕಾದ ಪರಿಹಾರ ಕಾರ್ಯಗಳ ಕುರಿತು ವೆಬ್‌ಸೈಟ್‌ನಲ್ಲಿ ಮಾಹಿತಿ,  ತುರ್ತು ಸಂದರ್ಭಗಳಲ್ಲಿ ಸಂಪರ್ಕಿಸಬೇಕಾದವರ ವಿಳಾಸ, ದೂರವಾಣಿ ಸಂಖ್ಯೆ ನೀಡಲಾಗಿದೆ ಎಂದರು.

ವೆಬ್‌ಸೈಟ್ ವಿಳಾಸ: www.ksdma.co.in
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.