
ಪ್ರಜಾವಾಣಿ ವಾರ್ತೆ
ಧಾರವಾಡ: ಇಲ್ಲಿಯ ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಹಾಗೂ ನಿವೃತ್ತ ಸಾರಿಗೆ ಅಧಿಕಾರಿ ಬೆಂಗಳೂರಿನ ಡಾ.ಜಿ.ಕೃಷ್ಣಪ್ಪ (ಬೇಂದ್ರೆ ಕೃಷ್ಣಪ್ಪ) ಈ ಸಾಲಿನ ‘ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿ’ಗೆ ಆಯ್ಕೆಯಾಗಿದ್ದಾರೆ.
‘ಪ್ರಶಸ್ತಿಯು ರೂ. 1 ಲಕ್ಷ ನಗದು ಬಹುಮಾನ ಹೊಂದಿದ್ದು, ತಲಾ ರೂ. 50 ಸಾವಿರದಂತೆ ಬಹುಮಾನದ ಮೊತ್ತವನ್ನು ಇಬ್ಬರಿಗೂ ವಿತರಿಸಲಾಗುವುದು’ ಎಂದು ದ.ರಾ.ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಅಧ್ಯಕ್ಷ ಡಾ.ಶ್ಯಾಮಸುಂದರ ಬಿದರಕುಂದಿ ಶುಕ್ರವಾರ ಪ್ರಕಟಿಸಿದರು. ‘ಬೇಂದ್ರೆ ಅವರ 119ನೇ ಜನ್ಮದಿನದ ಅಂಗವಾಗಿ ಇದೇ 31ರಂದು ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.