
ಪ್ರಜಾವಾಣಿ ವಾರ್ತೆಬೆಂಗಳೂರು: ರಾಜ್ಯ ಸರ್ಕಾರದ 2016ನೇ ಸಾಲಿನ ಡಾ.ಬಿ.ಆರ್. ಅಂಬೇಡ್ಕರ್ ಪ್ರಶಸ್ತಿಗೆ ಸಿಪಿಡಬ್ಲುಡಿ ನಿವೃತ್ತ ಮುಖ್ಯ ಎಂಜಿನಿಯರ್, ದಲಿತ ಚಿಂತಕ ಎಸ್.ಚಿನ್ನಸ್ವಾಮಿ ಮಾಂಬಳ್ಳಿ ಅವರನ್ನು ಆಯ್ಕೆ ಮಾಡಲಾಗಿದೆ.
‘ಪ್ರಶಸ್ತಿಯು ₹ 5 ಲಕ್ಷ ಹಾಗೂ 20 ಗ್ರಾಂ ಬಂಗಾರದ ಪದಕವನ್ನು ಒಳಗೊಂಡಿದೆ. ಗುರುವಾರ ಅಂಬೇಡ್ಕರ್ ದಿನಾಚರಣೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು’ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ತಿಳಿಸಿದರು.
ಚಿನ್ನಸ್ವಾಮಿ ಅವರು ಚಾಮರಾಜನಗರ ಜಿಲ್ಲೆಯ ಮಾಂಬಳ್ಳಿಯವರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.