ಬೆಂಗಳೂರು: ಬಿಜೆಪಿ ಸರ್ಕಾರ ಇದ್ದಾಗ ವಿವಿಧ ಅಕಾಡೆಮಿಗಳಿಗೆ ನೇಮಕವಾಗಿದ್ದ ಅಧ್ಯಕ್ಷರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಇಲ್ಲಿ ಪರೋಕ್ಷವಾಗಿ ಹೇಳಿದರು.
`ಜನ ಬದಲಾವಣೆ ಬಯಸಿದ ಕಾರಣ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಹಾಗೆಯೇ ಅಕಾಡೆಮಿಗಳ ಅಧ್ಯಕ್ಷರು ಕೂಡ ಬದಲಾಗಬೇಕಾಗುತ್ತದೆ. ಇದು ಹಿಂದಿನಿಂದಲೂ ನಡೆದುಕೊಂಡು ಬಂದಿದೆ' ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಕನ್ನಡ ಅಭಿವೃದ್ಧಿ ಪ್ರಾಧಿಕಾರ ಆಯೋಜಿಸಿದ್ದ ಸಮಾರಂಭದಲ್ಲಿ `ಕರ್ನಾಟಕ ಸಂಗಾತಿ' ಪರಿಷ್ಕೃತ ಆವೃತ್ತಿ ಬಿಡುಗಡೆ ನಂತರ ಅವರು ಸುದ್ದಿಗಾರರ ಜತೆ ಮಾತನಾಡಿದರು.
`ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರ ಜತೆ ಯಾವುದೇ ರೀತಿಯ ಭಿನ್ನಾಭಿಪ್ರಾಯ ಇಲ್ಲ. ಪಕ್ಷದ ಕಚೇರಿಗೆ ಬರಬೇಕೆಂದು ಮಂತ್ರಿಗಳಿಗೆ ಅವರು ಸೂಚಿಸಿರುವುದರಲ್ಲಿ ತಪ್ಪೇನೂ ಇಲ್ಲ' ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.